ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತಾ ಕಾರ್ಯಕ್ಕೆ ಸಹಕರಿಸಿ: ಕೃಷ್ಣಪ್ಪ

Last Updated 8 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಬೆಂಗಳೂರು: `ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕಬಾರದು. ಹಸಿ, ಒಣ ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿಂಗಡಣೆ ಮಾಡಿ ತಮ್ಮ ಮನೆ ಮುಂದೆ ಬರುವ ತಳ್ಳುಗಾಡಿಗೆ ಹಾಕಬೇಕು. ಆ ಮೂಲಕ ನಗರವನ್ನು ಸ್ವಚ್ಛವಾಗಿಡುವಲ್ಲಿ ಸಹಕರಿಸಬೇಕು' ಎಂದು ಶಾಸಕ ಎಂ. ಕೃಷ್ಣಪ್ಪ ಕರೆ ನೀಡಿದರು.

ವಿಜಯನಗರದ ಸರ್ವಿಸ್ ರಸ್ತೆಯಲ್ಲಿ ಸ್ವಚ್ಛತಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು `ನಗರ ಬೆಳೆದಂತೆಲ್ಲ ಜನ ಕಸ ವಿಲೇವಾರಿ ವಿಚಾರದಲ್ಲಿ ಜಾಗೃತರಾಗದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ' ಎಂದು ಆತಂಕ ವ್ಯಕ್ತಪಡಿಸಿದರು.

`ನಾಗರಿಕರು ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ನಮ್ಮ ಪರಿಸರವನ್ನು ಶುದ್ಧವಾಗಿಡಲು ಮನಸ್ಸು ಮಾಡಬೇಕಾದ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಸಹಭಾಗಿತ್ವ ಮಹತ್ವದ್ದಾಗಿದೆ' ಎಂದು ಅವರು ಅಭಿಪ್ರಾಯಪಟ್ಟರು.

ಪಾಲಿಕೆ ಸದಸ್ಯ ದೊಡ್ಡಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜು ಮೊದಲಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT