ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಯಂ ಸೇವಾ ಸಂಸ್ಥೆಗಳು ಗ್ರಾಮೀಣರನ್ನು ತಲುಪಲಿ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕೃಷ್ಣರಾಜಪುರ: ಗ್ರಾಮೀಣ ಪ್ರದೇಶ ಗಳಲ್ಲಿನ ಬಡವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸ್ವಯಂಸೇವಾ ಸಂಸ್ಥೆಗಳು ತಮ್ಮ ಕಾರ್ಯಚಟು ವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಬೇಕು ಎಂದು ನಿವೃತ್ತ ಲೋಕಾಯುಕ್ತ ಎನ್.ವೆಂಕಟಾಚಲ ಸಲಹೆ ನೀಡಿದರು.

ಚನ್ನಸಂದ್ರ ವರ್ತುಲ ರಸ್ತೆಯ ಬಳಿ ಎ.ಎಸ್.ಆರ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಎರಡು ದಿನಗಳ ಸ್ವಯಂಸೇವಾ ಸಂಸ್ಥೆಗಳ ಸಮಾವೇಶ ಮತ್ತು ಸದ್ಗುರು ಸೇವಾ ಸಮಿತಿ ವಾರ್ಷಿಕೋತ್ಸವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, `ಸ್ವಯಂಸೇವಾ ಸಂಸ್ಥೆಗಳು ಸರ್ಕಾರದ ಅನುದಾನವನ್ನು ಅವಲಂಬಿಸದೇ ಸ್ವಂತ ಬಲದ ಮೇಲೆ ನಿಲ್ಲಬೇಕು. ಸಮಾಜದಲ್ಲಿ ಇಂದು ಕ್ರಾಂತಿಕಾರಿ ಬದಲಾವಣೆ ಆಗಿಲ್ಲಸಮಾಜ ಪರಿವರ್ತನೆಗಾಗಿ ಸ್ವಯಂಸೇವಾ ಸಂಸ್ಥೆಗಳು ಶ್ರಮಿಸಬೇಕು~ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT