ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ

Last Updated 9 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಹೊಸಕೋಟೆ: ರಕ್ತದಾನ ಶ್ರೇಷ್ಠದಾನವಾಗಿದ್ದು, ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರ ಅಮೂಲ್ಯ ಜೀವ ಉಳಿಸುವಂತೆ ಸಚಿವ ಬಿ.ಎನ್.ಬಚ್ಚೇಗೌಡ ಕರೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ರಕ್ತದ ತೀವ್ರ ಕೊರತೆಯನ್ನು ಎದುರಿಸುತ್ತಿದ್ದೇವೆ. ಇದನ್ನು ಹೋಗಲಾಡಿಸುವಲ್ಲಿ ಜನರನ್ನು ಜಾಗೃತಿಗೊಳಿಸಬೇಕಿದೆ ಎಂದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಮುನಿಯಪ್ಪ ಮಾತನಾಡಿದರು. ಟಿ.ಸೊಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ತಿರುವರಂಗ ನಾರಾಯಣಸ್ವಾಮಿ, ತಾ.ಪಂ. ಅಧ್ಯಕ್ಷ ಟಿ.ಎಸ್.ರಾಜಶೇಖರ್, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಮಾಲಾ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT