ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಸ್ಥ ಸಮಾಜದ ನಿರ್ಮಾಣ ಎಲ್ಲರ ಜವಾಬ್ದಾರಿ

Last Updated 11 ಫೆಬ್ರುವರಿ 2012, 4:30 IST
ಅಕ್ಷರ ಗಾತ್ರ

ಬೆಳಗಾವಿ: `ಮಾನವೀಯ ಹಾಗೂ ಪ್ರಾಮಾಣಿಕತೆಯಿಂದ ಕೂಡಿದ ಸಮಾಜ ನಿರ್ಮಾಣದ ಜವಾಬ್ದಾರಿಯು ಸರ್ಕಾರ, ಅಧಿಕಾರಿಗಳು ಹಾಗೂ ಸಾರ್ವಜನಿಕರ ಮೇಲಿದೆ ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಂ. ಜಾಮದಾರ ಅಭಿಪ್ರಾಯಪಟ್ಟರು.

ನಗರದ ಎಸ್‌ಕೆಇ ಸಂಸ್ಥೆಯ ಆರ್‌ಪಿಡಿ ಕಾಲೇಜಿನಲ್ಲಿ `ಭ್ರಷ್ಟಾಚಾರದಿಂದ ಮಾನವ ಹಕ್ಕುಗಳ ಉಲ್ಲಂಘನೆ~ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

`ಆಹಾರ, ಶಿಕ್ಷಣ, ಕೆಲಸ ಮಾಡುವ ಅವಕಾಶ ನೀಡದಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಭ್ರಷ್ಟಾಚಾರದಿಂದ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದು ಹೊಸ ವಿಷಯವಾಗಿದ್ದು, ಇದರ ಮೇಲೆ ಮತ್ತಷ್ಟು ಬೆಳಕು ಚೆಲ್ಲುವ ಕೆಲಸ ಆಗಬೇಕು~ ಎಂದು ಅವರು ಹೇಳಿದರು.

`ಬಾಲ ಕಾರ್ಮಿಕರು, ವರದಕ್ಷಿಣೆ ಸಾವು, ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುವುದು ಸೇರಿದಂತೆ ವಿವಿಧ ಅನೈತಿಕ ಚಟುವಟಿಕೆಗಳಿಗೆ ಪರೋಕ್ಷ ವಾಗಿ ಭ್ರಷ್ಟಾಚಾರ ಕಾರಣವಾಗಿದೆ. ಭ್ರಷ್ಟಾಚಾರವು ಸಮಾಜದಲ್ಲಿ ಆರ್ಥಿಕ ಅಸಮಾನತೆಯನ್ನೂ ಹುಟ್ಟು ಹಾಕುತ್ತಿದೆ~ ಎಂದರು.

`ಸಮಾಜದಲ್ಲಿ ನಡೆಯುತ್ತಿರುವ ಹಲವಾರು ಹಗರಣ, ಅನೈತಿಕತೆಗಳಿಗೆ ಭ್ರಷ್ಟಾಚಾರ ಮೂಲವಾಗಿದೆ. ಅದರಿಂದಾಗಿ ಸಮಾಜದ ವಿವಿಧ ಸ್ತರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಯತ್ತಿದೆ~ ಎಂದು ಅವರು ಹೇಳಿದರು.

ಆರ್‌ಪಿಡಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷೆ ಲತಾ ಕಿತ್ತೂರು ಅಧ್ಯಕ್ಷತೆ ವಹಿಸಿದ್ದರು.
ಪ್ರಾಚಾರ್ಯ ಡಾ.ಎಸ್.ಎಲ್. ಕುಲಕರ್ಣಿ ಸ್ವಾಗತಿಸಿದರು. ಎಸ್.ಎಸ್. ಶಿಂಧೆ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT