ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಭಿಮಾನಕ್ಕಾಗಿ ಸ್ವಚ್ಛತಾ ಉತ್ಸವ

Last Updated 8 ಅಕ್ಟೋಬರ್ 2011, 10:35 IST
ಅಕ್ಷರ ಗಾತ್ರ

ಲೋಕವಳ್ಳಿ(ಮೂಡಿಗೆರೆ): ತಾಲ್ಲೂಕಿನ ಹಳೇ ಮೂಡಿಗೆರೆ ಗ್ರಾ.ಪಂ. ವತಿಯ ಲೋಕವಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಸ್ವಾಭಿಮಾನಕ್ಕಾಗಿ ಸ್ವಚ್ಛತಾ ಉತ್ಸವ-2011 ಜಾಥಾವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.

ಜಾಥ ನಂತರ ಮಾತನಾಡಿದ ನೊಡಲ್ ಅಧಿಕಾರಿ ಟಿ.ಆರ್.ರುದ್ರಪ್ಪ, ಗ್ರಾ.ಪಂ. ವ್ಯಾಪ್ತಿಯಲ್ಲಿ ಎಲ್ಲಾ ಕುಟುಂಬಗಳು ಶೌಚಾಲಯ ನಿರ್ಮಿಸಿಕೊಂಡು ಸ್ವಚ್ಛತೆ ಕಾಪಾಡಬೇಕು. ಶೌಚಾಲಯ ನಿರ್ಮಿಸಿಕೊಳ್ಳುವವರಿಗೆ ರೂ. 3,700 ಹಾಗೂ ಎಂಎನ್‌ಆರ್‌ಇಜಿಎ ಅಡಿಯಲ್ಲಿ 21 ಮಾನವ ದಿನಗಳ ಕೂಲಿ ಸೌಲಭ್ಯ ಇದ್ದು ಸದುಪಯೋಗ ಪಡೆಯುವಂತೆ ತಿಳಿಸಿದರು.

ಲೋಕವಳ್ಳಿ ರಮೇಶ್ ಮಾತನಾಡಿ, ಶೌಚಾಲಯ ನಿರ್ಮಿಸಿ ಸ್ವಚ್ಚತೆ ಕಾಪಾಡಿ ಎಂದು ಮನವಿ ಮಾಡಿದರು.
ಕಾರ್ಯದರ್ಶಿ ಪ್ರಕಾಶ್ ಗ್ರಾ.ಪಂ. ವತಿಯಿಂದ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು. ಗ್ರಾ.ಪಂ. ಅಧ್ಯಕ್ಷೆ ಜಾನಕಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಉಪಾಧ್ಯಕ್ಷ ಲಕ್ಷ್ಮಣ್, ಸದಸ್ಯರಾದ ಯೊಗೀಶ್, ರವಿ, ಶಕುಂತಲ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT