ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸ್ವಾವಲಂಬಿ ಜೀವನಕ್ಕೆ ಮಹಿಳೆಯರು ಮುಂದಾಗಲಿ'

Last Updated 1 ಡಿಸೆಂಬರ್ 2012, 5:52 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: `ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶ ಗಳಿಸುವುದು ಕಷ್ಟ. ಅದರ ನಡುವೆಯೂ ಮಹಿಳೆಯರು ಸ್ವಾವಲಂಬಿ ಜೀವನ ಕಂಡುಕೊಳ್ಳಲು ಅಗತ್ಯ ತರಬೇತಿ ಪಡೆದುಕೊಳ್ಳುತ್ತಿರುವುದು ಸಂತಸದ ಸಂಗತಿ' ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಓಬಳೇಶಪ್ಪ ತಿಳಿಸಿದರು.

ತಾಲ್ಲೂಕಿನ ನಂದಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಸುಭಿಕ್ಷಾ ಸಂಸ್ಕೃತಿ ಪ್ರತಿಷ್ಠಾನದ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ನಗರಪ್ರದೇಶದಲ್ಲಿ ಸಣ್ಣಪುಟ್ಟ ಉದ್ಯೋಗಗಳನ್ನು ಕಂಡುಕೊಳ್ಳಬಹುದು. ಆದರೆ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸಿಗುವುದು ಕಷ್ಟ' ಎಂದರು.

`ಮಹಿಳೆಯರು ಕುಟುಂಬ ಮತ್ತು ಮನೆ ನಿರ್ವಹಿಸುವುದರ ಜೊತೆಗೆ ಉದ್ಯೋಗಾವಕಾಶವನ್ನೂ ಸಹ ಪಡೆದುಕೊಂಡರೆ, ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಸ್ವಾವಲಂಬಿ ಜೀವನ ನಡೆಸುವುದರಿಂದ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಿಕೊಳ್ಳಲು ಅನುಕೂಲವಾಗುತ್ತದೆ' ಎಂದರು.

ಸುಭಿಕ್ಷಾ ಸಂಸ್ಕೃತಿ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಎಲ್.ನರಸಿಂಹಮೂರ್ತಿ ಮಾತನಾಡಿ, `ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಸುಭಿಕ್ಷಾ ಸಂಸ್ಕೃತಿ ಪ್ರತಿಷ್ಠಾನವು ಮಹಿಳೆಯರಿಗೆ ತರಬೇತಿ ನೀಡಲಿದೆ. ತರಬೇತಿ ಶಿಬಿರಕ್ಕೆ ಮಹಿಳೆಯರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಮೂರು ತಿಂಗಳ ಕಾಲ ಬೆಳಿಗ್ಗೆ ಮತ್ತು ಸಂಜೆ ತರಬೇತಿ ನೀಡಲಾಗುವುದು' ಎಂದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ದಸ್ತಗಿರಿಸಾಬ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ರಾಮಚಂದ್ರರೆಡ್ಡಿ, ಉಪಾಧ್ಯಕ್ಷೆ ಭಾರತಿ ಎನ್.ಮೂರ್ತಿ, ಸದಸ್ಯ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ನಾರಪ್ಪ, ಸದಸ್ಯ ಜಿ.ಮಂಜುನಾಥ್, ಸುಭಿಕ್ಷಾ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಆರ್.ಮಂಜುನಾಥ್, ಸಂಯೋಜನಾಧಿಕಾರಿ ಎ.ಆರ್.ಶ್ರೀನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT