ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಜಾರೆ ನಿರಶನ 2ನೇ ದಿನಕ್ಕೆ

Last Updated 11 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ರಾಳೆಗಣಸಿದ್ದಿ (ಪಿಟಿಐ):  ಜನ­ಲೋಕಪಾಲ ಮಸೂದೆಯನ್ನು ಸಂಸತ್‌ನಲ್ಲಿ ಅಂಗೀಕರಿಸಬೇಕು ಎಂದು ಒತ್ತಾಯಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ನಡೆಸುತ್ತಿರುವ ಅನಿರ್ದಿಷ್ಟಾವಧಿ  ಉಪವಾಸ ಸತ್ಯಾಗ್ರಹ ಎರಡನೇ  ದಿನ ಪೂರೈಸಿದೆ.

ಸ್ವಗ್ರಾಮದ ಯಾದವಬಾಬಾ ದೇವಾಲಯದ ಬಳಿ ಚಳಿಯ ವಾತಾವರಣದ ನಡುವೆಯೂ 76 ವರ್ಷದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ. ಹಜಾರೆ ಆರೋಗ್ಯ ಸ್ಥಿತಿಯನ್ನು ತಿಳಿಯಲು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಕೇಂದ್ರ ಸಚಿವ ವಿ.ನಾರಾಯಣ ಸ್ವಾಮಿ ಸರ್ಕಾರ ಲೋಕಪಾಲ ಮಸೂದೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಅಧಿವೇಶನದಲ್ಲಿಯೇ ಮಂಡಿಸಲು ಅವಕಾಶ ನೀಡುವಂತೆ ರಾಜ್ಯಸಭಾ ಅಧ್ಯಕ್ಷರಿಗೆ ನೋಟಿಸ್‌ ನೀಡಲಾಗಿದೆ ಎಂದು ಮಂಗಳವಾರ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT