ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣದುಬ್ಬರ ತಗ್ಗಿಸಲು ಆರ್‌ಬಿಐ ಆದ್ಯತೆ

Last Updated 8 ಜುಲೈ 2012, 19:30 IST
ಅಕ್ಷರ ಗಾತ್ರ

ಕೋಯಿಕ್ಕೋಡ್ (ಪಿಟಿಐ): ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಇದೇ 31ರಂದು ಮೊದಲ ತ್ರೈಮಾಸಿಕ ಹಣಕಾಸು ಪರಾಮರ್ಶೆ ಪ್ರಕಟಿಸಲಿದೆ.

`ಹಣದುಬ್ಬರ ಏರಿಕೆ ತಡೆಯುವುದು `ಆರ್‌ಬಿಐ~ನ ಮೊದಲ ಆದ್ಯತೆ. ಇದಕ್ಕಾಗಿ ಆರ್ಥಿಕ ಪ್ರಗತಿಯನ್ನು ಸ್ವಲ್ಪ ಮಟ್ಟಿಗೆ ತ್ಯಾಗ ಮಾಡಬೇಕಾಗುತ್ತದೆ. ಬೆಲೆ ಏರಿಕೆ ಬಿಸಿಯು ಶ್ರೀಮಂತರಿಗಿಂತ ಹೆಚ್ಚಾಗಿ ಬಡವರನ್ನು ತಟ್ಟಿದೆ~ ಎಂದು `ಆರ್‌ಬಿಐ~ ಗವರ್ನರ್ ಡಿ.ಸುಬ್ಬರಾವ್ ತಿಳಿಸಿದ್ದಾರೆ.

ಇಂಡಿಯನ್ ಇನ್‌ಸ್ಟಿಟ್ಯೂಟ್  ಆಫ್ ಮ್ಯಾನೇಜ್‌ಮೆಂಟ್ ಇಲ್ಲಿ ಶನಿವಾರ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿದ ಹಿನ್ನೆಲೆಯಲ್ಲಿ ಪೆಟ್ರೋಲ್ ದರ ತಗ್ಗಿಸಲಾಗಿದೆ. ಈ ರೀತಿ ಆದ್ಯತೆ ಮೇರೆಗೆ ಬೆಲೆ ಏರಿಕೆ ನಿಯಂತ್ರಿಸಲಾಗುವುದು ಎಂದು ಅವರು ಹೇಳಿದರು.

ಹಣದುಬ್ಬರ ತಗ್ಗದ ಹಿನ್ನೆಲೆಯಲ್ಲಿ `ಆರ್‌ಬಿಐ~ ಜೂನ್ 18ರಂದು ಪ್ರಕಟಿಸಿದ ತ್ರೈಮಾಸಿಕ ಹಣಕಾಸು ನೀತಿಯಲ್ಲಿ  `ರೆಪೊ~ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ವ್ಯತ್ಯಾಸ ತಾರದೆ ಯಥಾಸ್ಥಿತಿ ಕಾಯ್ದುಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT