ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲಬರ್ಗಾ: ಉಲ್ಬಣಿಸಿದ ವಾಂತಿ- ಭೇದಿ

Last Updated 10 ಸೆಪ್ಟೆಂಬರ್ 2011, 11:15 IST
ಅಕ್ಷರ ಗಾತ್ರ

ಬೀದರ್: ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ.

ವಾಂತಿ ಭೇದಿಯಿಂದಾಗಿ ಗ್ರಾಮದ ಒಟ್ಟು 11 ಜನ ಗುರುವಾರ ಮತ್ತು ಶುಕ್ರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಪೈಕಿ ಕೆಲವರನ್ನು ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಟ್ರಾನ್ಸ್‌ಫಾರ್ಮರ್ ಸುಟ್ಟು ಹೋಗಿದೆ. ಇದನ್ನು ದುರಸ್ತಿ ಮಾಡುವಂತೆ ಅನೇಕ ಬಾರಿ ಜೆಸ್ಕಾಂ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಅದಾಗಿಯು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಬೋರ್‌ವೆಲ್ ನೀರು ಸರಬರಾಜು ಆಗುತ್ತಿಲ್ಲ. ಬಾವಿ ನೀರನ್ನೇ ಅವಲಂಬಿಸಬೇಕಾಗಿದೆ. ಕಲುಷಿತ ನೀರು ಕುಡಿದಿದ್ದರಿಂದಲೇ ವಾಂತಿ ಭೇದಿ ಉಲ್ಬಣಗೊಂಡಿರಬೇಕು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ವಾಂತಿ ಭೇದಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ನೀರು ಹಾಗೂ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಡಂಗೂರು ಸಾರಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಮೇತ್ರೆ, ಯುವ ಪ್ರಮುಖರಾದ ಸಂಜು ಪ್ರಭಾ ಮತ್ತಿತರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT