ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಿ ತಪ್ಪಿದ ಕಾವೇರಿ ಎಕ್ಸ್‌ಪ್ರೆಸ್: ಪ್ರಯಾಣಿಕರಿಗೆ ಗಾಯ

Last Updated 22 ಅಕ್ಟೋಬರ್ 2012, 6:35 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು- ಚೆನ್ನೈ ಕಾವೇರಿ ಎಕ್ಸ್‌ಪ್ರೆಸ್ ರೈಲು ಸೋಮವಾರ ಮುಂಜಾನೆ ಆಂಧ್ರ ಪ್ರದೇಶದ ಚಿತ್ತೂರಿನ ಕುಪ್ಪಂ ಬಳಿ ಹಳಿ ತಪ್ಪಿದ ಪರಿಣಾಮ ಸುಮಾರು 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವುದು ವರದಿಯಾಗಿದೆ.

ಚಿತ್ತೂರು ಭಾಗದಲ್ಲಿ ಭಾರಿ ಮಳೆ ಬೀಳುತ್ತಿರುವ ಪರಿಣಾಮ ಹಳಿಗಳು ಸಡಿಲಗೊಂಡಿವೆ. ಇದರಿಂದಾಗಿ ಕಾವೇರಿ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದೆ. ಎಂಜಿನ್ ಸೇರಿದಂತೆ ನಾಲ್ಕು ಬೋಗಿಗಳು ಉರುಳಿವೆ.  ಈ ದುರ್ಘಟನೆಯಿಂದಾಗಿ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುತ್ತಾರೆ. ಗಾಯಗೊಂಡವರನ್ನು ಚಿತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಲ್ಲಿ ಸಿಲುಕಿದ ಇತರೆ ಪ್ರಯಾಣಿಕರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಈ ಪ್ರದೇಶದಲ್ಲಿ ಭಾರಿ ಮಳೆ ಬೀಳುತ್ತಿದ್ದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ಈ ಘಟನೆಯಿಂದಾಗಿ ಈ ಭಾಗದಲ್ಲಿನ ರೈಲುಗಳ ಸಂಚಾರ ಅಸ್ತವ್ಯಸ್ಥಗೊಂಡಿದ್ದು, ಕೆಲ ಸಮಯ ರೈಲುಗಳ ಸಂಚಾರ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಾಯಿಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT