ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಎಎಸ್‌ಸಿಗೆ ಗೆಲುವು

Last Updated 14 ಫೆಬ್ರುವರಿ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ದೀಪು ತಂದಿತ್ತ ಎರಡು ಗೋಲುಗಳ ನೆರವಿನಿಂದ ಎಎಸ್‌ಸಿ ತಂಡದವರು ಇಲ್ಲಿ ನಡೆಯುತ್ತಿರುವ ಕೆಎಸ್‌ಎಚ್‌ಎ ಆಶ್ರಯದ ಓಜೋನ್‌ಗ್ರೂಪ್ ರಾಜ್ಯ ಸೂಪರ್ ಡಿವಿಷನ್ ಲೀಗ್ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಗೆಲುವು ಪಡೆದರು.

ಅಕ್ಕಿತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಎಎಸ್‌ಸಿ 4-2 ಗೋಲುಗಳಿಂದ ಎಬಿಎಚ್‌ಎ ತಂಡವನ್ನು ಮಣಿಸಿತು. ವಿರಾಮದ ವೇಳೆಗೆ ವಿಜಯಿ ತಂಡ 2-0 ಗೋಲುಗಳಿಂದ ಮುನ್ನಡೆ ಸಾಧಿಸಿತ್ತು. ದೀಪು ಪಂದ್ಯದ 30 ಹಾಗೂ 33ನೇ ನಿಮಿಷಗಳಲ್ಲಿ ಚೆಂಡನ್ನು ಗುರಿ ಸೇರಿಸಿದರು. ಟುಟಿ 49ನೇ ನಿಮಿಷದಲ್ಲಿ ಚೆಂಡನ್ನು ಗುರಿ ಸೇರಿಸಿ ಮುನ್ನಡೆಯನ್ನು 3-0ಗೆ ಹೆಚ್ಚಿಸಿಕೊಂಡರು. ಮತ್ತೊಂದು ಗೋಲು 51ನೇ ನಿಮಿಷದಲ್ಲಿ `ಉಡುಗೊರೆ'ಯಾಗಿ ಲಭಿಸಿತು.

ಕೊನೆಯಲ್ಲಿ ಮರುಹೋರಾಟ ನಡೆಸಿದ ಎಬಿಎಚ್‌ಎ ತಂಡ ಸರಬ್ಜಿತ್ ಸಿಂಗ್ (53ನೇ ನಿಮಿಷ) ಹಾಗೂ ಮೊಹಮ್ಮದ್ ನಿಜಾಮುದ್ದೀನ್ (58) ಗಳಿಸಿದ ಗೋಲುಗಳ ನೆರವಿನಿಂದ ಸೋಲಿನ ಅಂತರವನ್ನು ತಗ್ಗಿಸಿತು. ಬಿಇಎಂಎಲ್- ಪಿಸಿಟಿಸಿ ಪಂದ್ಯ ಡ್ರಾ: ಬಿಇಎಂಎಲ್ ಮತ್ತು ಪಿಸಿಟಿಸಿ ತಂಡಗಳ ನಡುವಿನ ದಿನದ ಮತ್ತೊಂದು ಪಂದ್ಯ 1-1 ಗೋಲಿನ ಡ್ರಾದಲ್ಲಿ ಕೊನೆಗೊಂಡಿತು.

ಸಿಪ್ರಿಂದ್ ಐಂದ್ ಎಂಟನೇ ನಿಮಿಷದಲ್ಲಿ ಪಿಸಿಟಿಸಿಗೆ ಮುನ್ನಡೆ ತಂದಿತ್ತರೆ, ಕಿರಣ್ 22ನೇ ನಿಮಿಷದಲ್ಲಿ ಬಿಇಎಂಎಲ್‌ಗೆ ಸಮಬಲದ ಗೋಲು ಗಳಿಸಿಕೊಟ್ಟರು. ಎರಡನೇ ಅವಧಿಯಲ್ಲಿ ಯಾವುದೇ ಗೋಲುಗಳು ದಾಖಲಾಗಲಿಲ್ಲ. ಶುಕ್ರವಾರ ನಡೆಯುವ ಪಂದ್ಯಗಳಲ್ಲಿ ಕೆನರಾ ಬ್ಯಾಂಕ್- ಬಿಇಎಂಎಲ್ ಮತ್ತು ಎಎಸ್‌ಸಿ- ಎಂಇಜಿ `ಬಿ' ತಂಡಗಳು ಪೈಪೋಟಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT