ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಭಾರತ ಮಹಿಳೆಯರಿಗೆ ನಿರಾಸೆ

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಓರ್ಡೊಸ್, ಚೀನಾ (ಪಿಟಿಐ): ಭಾರತ ಮಹಿಳಾ ತಂಡ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಪಂದ್ಯದಲ್ಲಿ ಸತತ ಎರಡನೇ ಸೋಲು ಅನುಭವಿಸಿತು. ಇದರೊಂದಿಗೆ ಫೈನಲ್ ಪ್ರವೇಶಿಸುವ ಸಾಧ್ಯತೆ ಅಸ್ತಮಿಸಿದೆ.

ಮಂಗಳವಾರ ನಡೆದ ಪಂದ್ಯದಲ್ಲಿ ಭಾರತ 0-5 ರಲ್ಲಿ ಜಪಾನ್ ಎದುರು ಪರಾಭವಗೊಂಡಿತು. ಪಾಯಿಂಟ್ ಖಾತೆ ತೆರೆಯಲು ವಿಫಲವಾಗಿರುವ ಭಾರತ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗುರುವಾರ ಚೀನಾ ತಂಡವನ್ನು ಎದುರಿಸಲಿದೆ.

ಜಪಾನ್ ವಿರುದ್ಧದ ಪಂದ್ಯದಲ್ಲಿ ಭಾರತ ಎಲ್ಲ ವಿಭಾಗಗಳಲ್ಲೂ ಕಳಪೆ ಪ್ರದರ್ಶನ ನೀಡಿತು. ಮಿಡ್‌ಫೀಲ್ಡ್‌ನಲ್ಲಿ ಸಾಕಷ್ಟು ಲೋಪಗಳು ಸಂಭವಿಸಿದ ಕಾರಣ ಹೀನಾಯ ಸೋಲು ಎದುರಾಯಿತು.

ವಿರಾಮದ ವೇಳೆಗೆ 2-0 ರಲ್ಲಿ ಮುನ್ನಡೆ ಸಾಧಿಸಿದ್ದ ಜಪಾನ್ ತಂಡದ ತಂಡಕ್ಕೆ ರಿಕಾ ಕೊಮಜಾವ ಎರಡು ಗೋಲುಗಳನ್ನು ತಂದಿತ್ತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT