ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲು ಉತ್ಪಾದಕರ ಮಕ್ಕಳಿಗೆ ಶೈಕ್ಷಣಿಕ ನೆರವು

Last Updated 15 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಚನ್ನಪಟ್ಟಣ: ಹೈನುಗಾರಿಕೆಯಲ್ಲಿ ತೊಡಗಿರುವ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಒಕ್ಕೂಟದಿಂದ ಕೊಡುವ ಹಣವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಕಾಣಬೇಕು ಎಂದು ಬಮೂಲ್ ನಿರ್ದೇಶಕ ಎಸ್. ಲಿಂಗೇಶ್‌ಕುಮಾರ್ ತಿಳಿಸಿದರು.

ಹಾಲು ಒಕ್ಕೂಟದ ಕಚೇರಿಯಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಅಂಗವಾಗಿ ಚೆಕ್ ನೀಡಿ ಮಾತನಾಡುತ್ತಾ ತಾಲ್ಲೂಕಿನಾದ್ಯಂತ ಹಸು ಸಾಕಾಣಿಕೆಯಲ್ಲಿ ತೊಡಗಿರುವ ರೈತರ ಸುಮಾರು 223 ವಿದ್ಯಾರ್ಥಿಗಳಿಗೆ 10ಲಕ್ಷದ 10 ಸಾವಿರ ರೂಗಳನ್ನು ಮೀಸಲಿಟ್ಟಿದ್ದು. ಹಾಲು ಸರಬರಾಜು ಮಾಡುವ ಸದಸ್ಯರ ಮಕ್ಕಳ ಅರ್ಜಿಗಳನ್ನು ಒಕ್ಕೂಟದ ಕಚೇರಿಯಲ್ಲಿ ಪಡೆದು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಅಕ್ಟೋಬರ್ ಅಂತ್ಯಕ್ಕೆ ಕಚೇರಿಗೆ ಸಲ್ಲಿಸಬೇಕೆಂದು ತಿಳಿಸಿದರು.

ಸ್ಫರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸಹನೆಯಿಂದ ಚಾಚು ತಪ್ಪದೆ ಮಹತ್ವ ಪೂರ್ಣ ಫಲಿತಾಂಶ ಗಳಿಸಿಕೊಂಡರೆ ಉತ್ತಮವಾಗಿ ರೂಪಿಸಕೊಳ್ಳಬಹುದು ಎಂದು ಸಲಹೆ ನೀಡಿದರು. ಸಂದರ್ಭದಲ್ಲಿ ಉಪ ವ್ಯವಸ್ಥಾಪಕ ಎಚ್.ಪಿ. ಮುನಿರಾಜು, ಡಾ. ಕೆ.ಸಿ. ಶ್ರೀಧರ್, ವಿಸ್ತರಣಾಧಿಕಾರಿ ಎಚ್. ಶ್ರೀಧರ್ ಉಪಸ್ಥಿತರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT