ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲು ಉತ್ಪಾದಕರಿಗೆ ಹೆಚ್ಚಿನ ಅನುದಾನ

Last Updated 1 ಡಿಸೆಂಬರ್ 2012, 5:07 IST
ಅಕ್ಷರ ಗಾತ್ರ

ಮಾಲೂರು: ಹಾಲು ಉತ್ಪಾದಕರಿಗೆ ಮೂಲ ಸೌಕರ್ಯ ಅಭಿವೃದ್ಧಿಗಾಗಿ ನೀಡುತ್ತಿದ್ದ ಅನುದಾನವನ್ನು ರೂ 4 ಕೋಟಿಯಿಂದ ರೂ 15 ಕೋಟಿಗೆ ಹೆಚ್ಚಿಸಲಾಗಿದೆ ಎಂದು ಕೋಚಿಮಲ್ ಅಧ್ಯಕ್ಷ ಡಾ.ಎ.ವಿ.ಪ್ರಸನ್ನ ತಿಳಿಸಿದರು.

ತಾಲ್ಲೂಕಿನ ನೊಸಗೆರೆ ಗ್ರಾಮದಲ್ಲಿ ಶುಕ್ರವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಮತ್ತು ಬಿಎಂಸಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರೂ 20 ಲಕ್ಷ ವೆಚ್ಚದಲ್ಲಿ 2 ಸಾವಿರ ಲೀಟರ್ ಸಂಗ್ರಹ ಸಾಮರ್ಥ್ಯದ ಕಟ್ಟಡ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿ.ಪಂ. ಸದಸ್ಯೆ ಯಲ್ಲಮ್ಮ, ತಾ.ಪಂ. ಅಧ್ಯಕ್ಷ ಸಿ.ಚಂದ್ರಪ್ಪ, ಸದಸ್ಯ ಪುಟ್ಟಸ್ವಾಮಿ, ನೊಸಗೆರೆ ಗ್ರಾ.ಪಂ. ಅಧ್ಯಕ್ಷ ಕೆ.ಎಂ.ಅಶೋಕ್‌ಕುಮಾರ್, ಜೆಡಿಎಸ್ ಮುಖಂಡ ಆರ್.ಪ್ರಬಾಕರ್, ನೊಸಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಾಪುರಾವ್, ಕಾರ್ಯದರ್ಶಿ ಕೃಷ್ಣಪ್ಪ, ಗ್ರಾ.ಪಂ. ಸದಸ್ಯರಾದ ಸಿ.ಎಂ.ನಾರಾಯಣಸ್ವಾಮಿ, ಹಾಲು ಉತ್ಪಾದಕ ಸಹಕಾರ ಸಂಘದ ಮಾಜಿ ಅಧ್ಯಕ್ಷ ಈಶ್ವರ್, ಮುನಿರಾಜು, ನೌಕರರ ಸಂಘದ ಅಧ್ಯಕ್ಷ ಕೆ.ನಾರಾಯಣಗೌಡ, ಬಿಎಂಸಿ ಘಟಕದ ಡಾ.ವೆಂಕಟಾಚಲಪತಿ, ಕೋಚಿಮಲ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಜಿ.ಟಿ.ಗೋಪಾಲ್, ಉಪವ್ಯವಸ್ಥಾಪಕ ಡಾ.ಕೆ.ವಿ.ವಿಶ್ವನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT