ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲು ಕಲಬೆರಕೆ: ಜೀವಾವಧಿ ಶಿಕ್ಷೆಗೆ ‘ಸುಪ್ರೀಂ’ ಒಲವು

Last Updated 5 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಲಬೆರಕೆಯುಕ್ತ ಹಾಲು ಉತ್ಪಾದನೆ ಮತ್ತು ಮಾರಾಟ­ದಲ್ಲಿ ತೊಡಗಿರುವವರಿಗೆ ಜೀವಾವಧಿ ಶಿಕ್ಷೆ ನೀಡುವುದಕ್ಕೆ ಒಲವು ತೋರಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕಾನೂನುಗಳಿಗೆ ಸೂಕ್ತ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಆಹಾರ ಸುರಕ್ಷತಾ ಕಾಯ್ದೆಯಲ್ಲಿ ಉಲ್ಲೇಖಿಸಿರುವ ಆರು ತಿಂಗಳ ಜೈಲು ಶಿಕ್ಷೆ ಅತ್ಯಂತ ಕಡಿಮೆಯಾಯಿತು ಎಂದು ಅಭಿಪ್ರಾಯ ಪಟ್ಟಿರುವ ನ್ಯಾಯ­ಮೂರ್ತಿ­ಗಳಾದ ಕೆ.ಎಸ್‌. ರಾಧಾ­ಕೃಷ್ಣನ್‌ ಮತ್ತು ಕೆ. ಸಿಕ್ರಿ ಅವರನ್ನೊಳ­ಗೊಂಡ ನ್ಯಾಯಪೀಠ,  ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಸರ್ಕಾರಗಳು ಮಾಡಿರುವಂತೆ ಕಾನೂನುಗಳಿಗೆ ತಿದ್ದುಪಡಿ ತನ್ನಿ ಎಂದು ರಾಜ್ಯಗಳಿಗೆ ಸೂಚಿಸಿತು.

ವಿವಿಧ ರಾಜ್ಯಗಳಲ್ಲಿ ಎಗ್ಗಿಲ್ಲದೆ ನಡೆ­ಯುತ್ತಿರುವ ಕಲಬೆರಕೆಯುಕ್ತ ಹಾಲಿನ ಉತ್ಪಾದನೆ ಮತ್ತು ಮಾರಾಟಕ್ಕೆ ತಡೆ ಒಡ್ಡುವಂತೆ ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT