ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಭಾರಿ ಕೊಡುಗೆ

Last Updated 12 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪರಿಷ್ಕೃತ ಬಜೆಟ್‌ನಲ್ಲಿ ಬರಪೂರ ಕೊಡುಗೆ ಘೋಷಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹೆಚ್ಚಿಸಲಾಗಿದೆ.  ಬಾಕಿ ಉಳಿದಿರುವ ಶುಲ್ಕ ಮರುಪಾವತಿಗೆ ರೂ 165 ಕೋಟಿ ನೀಡಲಾಗಿದ್ದು ಈ ವರ್ಷ ಶುಲ್ಕ ಮರು ಪಾವತಿಗೆ ರೂ 70 ಕೋಟಿ ಒದಗಿಸಲಾಗಿದೆ.

ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಕೋರ್ಸ್ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ 2ರ ಬಡ್ಡಿ ದರದಲ್ಲಿ ಗರಿಷ್ಠ 1 ಲಕ್ಷ ರೂಪಾಯಿ ಸಾಲ, ಐಎಎಸ್, ಕೆಎಎಸ್, ಬ್ಯಾಂಕಿಗ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಹಿಂದುಳಿದ ವರ್ಗಗಳ ಒಂದು ಸಾವಿರ ಅಭ್ಯರ್ಥಿಗಳಿಗೆ ನೆರವು, ಊಟ ಮತ್ತು ವಸತಿ ಸಹಾಯ ಯೋಜನೆ ಆರಂಭ.

ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದ ಪ್ರತಿಭಾವಂತ 20 ಸಾವಿರ ವಿದ್ಯಾರ್ಥಿಗಳಿಗೆ ತಿಂಗಳಿಗೆ 1500 ರೂಪಾಯಿಯಂತೆ 10 ತಿಂಗಳು ನೀಡಲಾಗುವುದು. ಒಟ್ಟು 15 ಸಾವಿರ ರೂಪಾಯಿಗಳನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಪ್ರಕಟಿಸಲಾಗಿದೆ.

ಹಿಂದುಳಿದ ವರ್ಗಗಳ ಜನಾಂಗದವರು ನಡೆಸುವ ಖಾಸಗಿ ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ ಗರಿಷ್ಠ 5 ಲಕ್ಷ ರೂ ಅನುದಾನ. ಹಿಂದುಳಿದ ವರ್ಗಗಳ ಕೆನೆಪದರ ಮಿತಿಯನ್ನು 3.50 ಲಕ್ಷ ರೂಪಾಯಿಗಳಿಂದ 4.50 ಲಕ್ಷ ರೂಪಾಯಿಗೆ ಹೆಚ್ಚಿಸಲು ಪರಿಷ್ಕೃತ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಶೈಕ್ಷಣಿಕ ಸವಲತ್ತು ಪಡೆದುಕೊಳ್ಳಲು ಇರುವ ಆದಾಯ ಮಿತಿಯನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಳ. ಪ್ರವರ್ಗ -1ಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

*ತಾಲ್ಲೂಕು ಮಟ್ಟದಲ್ಲಿ ಹಿಂದುಳಿದ ವರ್ಗದವರ ಕಲ್ಯಾಣ ಕಚೇರಿ ಆರಂಭ. ಇದಕ್ಕೆ ರೂ4 ಕೋಟಿ ಮೀಸಲು.
*ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ಜಾತಿವಾರು ಸಮೀಕ್ಷೆ.
*ಪ್ರತಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ 100 ಸಂಖ್ಯಾಬಲದ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯ ಸ್ಥಾಪನೆ.
*ಮಹಿಳಾ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ಪ್ರತಿ ಜಿಲ್ಲೆಯಲ್ಲಿ ನೂರು ಸಂಖ್ಯಾಬಲದ ವಿದ್ಯಾರ್ಥಿ ನಿಲಯ ಸ್ಥಾಪನೆ.
*ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟು ಜನಾಂಗಗಳ ಕಲ್ಯಾಣಕ್ಕೆ ರೂ 50 ಕೋಟಿ
*ಗೊಲ್ಲ ಸಮುದಾಯದ ಕಾಲೋನಿಗಳಲ್ಲಿ ಶೈಕ್ಷಣಿಕ ಸೌಲಭ್ಯಕ್ಕೆ ರೂ 25 ಕೋಟಿ
*ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆ. ರೂ 5 ಕೋಟಿ ಅನುದಾನ
*ಶಿವಮೊಗ್ಗ ಜಿಲ್ಲೆ ಸಾಗರ, ತೀರ್ಥಹಳ್ಳಿ, ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಮೊಗವೀರರ ಸಮುದಾಯ ಭವನ ನಿರ್ಮಾಣಕ್ಕೆ ಒಟ್ಟಾರೆ ರೂ 2 ಕೋಟಿ
*ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಘಟಕ ವೆಚ್ಚ ರೂ 1.50 ಲಕ್ಷದಿಂದ 2 ಲಕ್ಷಕ್ಕೆ ಏರಿಕೆ.
*ಕಿರು ಸಾಲ ಯೋಜನೆಯಲ್ಲಿ ಶೇ *ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮೊತ್ತ 5 ಸಾವಿರದಿಂದ 10 ಸಾವಿರ ರೂಪಾಯಿಗೆ ಏರಿಕೆ.
*ಚೈತನ್ಯ ಸ್ವಯಂ ಉದ್ಯೋಗ ಯೋಜನೆಯ ಘಟಕ ವೆಚ್ಚ 35 ಸಾವಿರದಿಂದ 50 ಸಾವಿರ ರೂಪಾಯಿಗೆ ಹೆಚ್ಚಳ
*ಮಡಿವಾಳ, ಸವಿತ, ಹಡಪದ, ಕುಂಬಾರ, ಕಮ್ಮಾರ, ಗಾಣಿಗ, ತಿಗಳ, ಉಪ್ಪಾರ, ಗೌಳಿ, ದರ್ಜಿ, ಬಡಗಿ, ಭಜಂತ್ರಿ, ಕುರುಬ, ಮೀನುಗಾರ, ನೇಕಾರ ಇತ್ಯಾದಿ ಸಮುದಾಯಗಳ ಪಾರಂಪರಿಕ ವೃತ್ತಿ ಅಭಿವೃದ್ಧಿಗಾಗಿ ಪ್ರತ್ಯೇಕ ಯೋಜನೆ ಅನುಷ್ಠಾನ.
*ಕುರುಬ ಸಮಾಜದವರಿಗೆ ಕುರಿ ಸಾಕಲು ಹಾಗೂ ಕಂಬಳಿ ನೇಕಾರಿಕೆಗೆ ಶೇ 4ರ ಬಡ್ಡಿ ದರದಲ್ಲಿ ಗರಿಷ್ಠ ರೂ1 ಲಕ್ಷ  ಸಾಲ.
*ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನಕ್ಕೆ ರೂ 5 ಕೋಟಿ
*ಹಿಂದುಳಿದ ವರ್ಗಗಳ ಧಾರ್ಮಿಕ ಹಾಗೂ ಇತರೆ ಸಂಘ ಸಂಸ್ಥೆಗಳ ಸಮುದಾಯ ಭವನ, ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ರೂ 75 ಕೋಟಿ
*ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಈ ಸಲದ ಬಜೆಟ್‌ನಲ್ಲಿ ಒಟ್ಟಾರೆ  ರೂ 1369 ಕೋಟಿ ಅನುದಾನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT