ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ನಾಗರಿಕರಿಗೆ ಪಿಂಚಣಿ: ಆಗ್ರಹ

Last Updated 1 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೋಲಾರ: ತನಿಖೆ ನಡೆಸದೆ ಪಿಂಚಣಿ ಪಟ್ಟಿಯಿಂದ ಕೈಬಿಟ್ಟಿರುವ ಹಿರಿಯ ನಾಗರಿಕರನ್ನು ಮತ್ತೆ ಸೇರ್ಪಡೆಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಆದಿಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಶಾಖೆಯ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಧರಣಿ ನಡೆಸಿದರು.

ಈಗ ನೀಡುತ್ತಿರುವ 400 ರೂಪಾಯಿ ಮಾಸಿಕ ಪಿಂಚಣಿಯಿಂದ ಹಿರಿಯರು ಜೀವನ ನಡೆಸುವುದು ಸಾಧ್ಯವಿಲ್ಲ. ಹೀಗಾಗಿ ಮಾಸಿಕ ಪಿಂಚಣಿಯನ್ನು 2 ಸಾವಿರ ರೂಪಾಯಿಗೆ ಏರಿಸಬೇಕು. ಹಿರಿಯ ನಾಗರಿಕರ ಅರ್ಹತಾ ವಯೋಮಿತಿಯನ್ನು 60ಕ್ಕೆ ಇಳಿಸಬೇಕು. ಹಿರಿಯ ನಾಗರಿಕರಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಅವರಿಗಾಗಿಯೇ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ರಸ್ತೆ ಸಾರಿಗೆ ಸೇರಿದಂತೆ ಸರ್ಕಾರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಹಿರಿಯ ನಾಗರಿಕರನ್ನು ವಿಶೇಷವಾಗಿ ಪರಿಗಣಿಸಿ, ಪ್ರಯಾಣ ದರದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಕೂಡಲೇ ಘೋಷಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ವರದೇನಹಳ್ಳಿ ವೆಂಕಟೇಶ್, ಹಾರೋಹಳ್ಳಿ ರವಿ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT