ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಪಿಟೀಲು ವಾದಕ ಗೋಪಾಲಕೃಷ್ಣನ್ ನಿಧನ

Last Updated 3 ಜನವರಿ 2013, 19:59 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಹಿರಿಯ ಪಿಟೀಲು ವಾದಕ ಎಂ.ಎಸ್. ಗೋಪಾಲಕೃಷ್ಣನ್ ಅವರು ಗುರುವಾರ ನಿಧನರಾದರು.
ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರಿಗೆ ಬುಧವಾರ ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಾಗ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗಿನ ಜಾವ ಕೊನೆಯುಸಿರೆಳೆದರು. ಅವರಿಗೆ 82 ವರ್ಷ            ವಯಸ್ಸಾಗಿತ್ತು.

ಏಳು ದಶಕಗಳ ಸುದೀರ್ಘ ಕಾಲದಿಂದ ಗಾಯನ ಕ್ಷೇತ್ರದಲ್ಲಿ ತೊಡಗಿದ್ದ ಅವರಿಗೆ ಪದ್ಮಭೂಷಣ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಸಂದಿದ್ದವು. ಕರ್ಣಾಟಕ ಮತ್ತು ಹಿಂದೂಸ್ತಾನಿ ಸಂಗೀತ ಪ್ರಕಾರಗಳ ಬಗ್ಗೆ ಅಗಾಧ ಜ್ಞಾನವನ್ನು ಅವರು ಹೊಂದಿದ್ದರು.

ಲಾಲ್ಗುಡಿ ಜಿ.ಜಯರಾಮನ್ ಮತ್ತು ಟಿ.ಎನ್.ಕೃಷ್ಣನ್ ಅವರ ಸಮಕಾಲೀನರಾದ ಗೋಪಾಲಕೃಷ್ಣನ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT