ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇಬಿದನೂರು ಸ್ತ್ರೀಶಕ್ತಿ ಭವನಕ್ಕೆ ಚಾಲನೆ

Last Updated 19 ಜೂನ್ 2011, 9:10 IST
ಅಕ್ಷರ ಗಾತ್ರ

ಗೌರಿಬಿದನೂರು: ಸ್ತ್ರೀಶಕ್ತಿ ಸಂಘಗಳಿಗೆ ಸರ್ಕಾರ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ನೀಡುತ್ತಿದ್ದು, ಸದಸ್ಯಯರು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಸಲಹೆ ನೀಡಿದರು.

ತಾಲ್ಲೂಕಿನ ಹಿರೇಬಿದನೂರು ಗ್ರಾಮದಲ್ಲಿ ರೂ.3 ಲಕ್ಷ ವೆಚ್ಚದ  ಸ್ತ್ರೀಶಕ್ತಿ ಭವನಕ್ಕೆ ಶನಿವಾರ ಚಾಲನೆ ನೀಡಿದ ಅವರು, `ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಸ್ತ್ರೀಶಕ್ತಿ ಸಂಘಗಳು ಬೆಳೆಯಬೇಕು. ಆರ್ಥಿಕವಾಗಿ ಸ್ವಾವಲಂಬನೆ ಗಳಿಸಬೇಕು~ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ರಜನಿ ವೇಣುಗೋಪಾಲರೆಡ್ಡಿ ಮಾತನಾಡಿ, `ಹಿರೇಬಿದನೂರು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು  ಸರ್ಕಾರದ ಅನುದಾನದಿಂದ ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಮಾದರಿ ಕ್ಷೇತ್ರವನ್ನಾಗಿಸುವ ಗುರಿಯಿದೆ~ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಕಾಶ್‌ರೆಡ್ಡಿ, ವೇಣುಗೋಪಾಲರೆಡ್ಡಿ, ಉಗ್ರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT