ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಲರಿ ನಿವೃತ್ತಿ ಇಂಗಿತ

Last Updated 27 ಜನವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಅಮೆರಿಕದಲ್ಲಿ ಕಳೆದ 20 ವರ್ಷಗಳಿಂದ ರಾಜಕೀಯದ ಉನ್ನತ ಸ್ತರದಲ್ಲಿರುವ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಶೀಘ್ರದಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಬರಾಕ್ ಒಬಾಮ ಎರಡನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದರೆ ಅವರ ಆಡಳಿತದಲ್ಲಿ ಕಾರ್ಯನಿರ್ವಹಿಸುವ ಬಯಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಎರಡು ದಶಕಗಳಿಂದ ಅತಿ ಒತ್ತಡದಲ್ಲಿ ಕೆಲಸ ಮಾಡಿ ತಮಗೆ ಆಯಾಸ ಆಗಿದೆ ಎಂದು ಕ್ಲಿಂಟನ್ ಹೇಳಿದ್ದಾರೆ.
ಎರಡನೇ ಅವಧಿಗೆ ವಿದೇಶಾಂಗ ಇಲಾಖೆ ಕಾರ್ಯದರ್ಶಿಯಾಗಿ ಮುಂದುವರಿಯುವುದಿಲ್ಲ ಎಂಬುದಾಗಿ ಸಹೋದ್ಯೋಗಿಗಳಿಗೆ ಹಿಲರಿ ಕ್ಲಿಂಟನ್ ಗುರುವಾರ ತಿಳಿಸಿದ್ದಾರೆ. ಒಬಾಮ ತಮ್ಮ ಸ್ಥಾನಕ್ಕೆ ಮತ್ತೊಬ್ಬರನ್ನು ನಾಮಕರಣ ಮಾಡುವವರೆಗೆ ಮಾತ್ರ ತಾವು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುವುದಾಗಿಯೂ ಹಿಲರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT