ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡಿಕೆದಾರರಿಗೆ ಮಾಹಿತಿ: ಸೆಬಿ ಕ್ರಮ

Last Updated 21 ಫೆಬ್ರುವರಿ 2011, 16:35 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಷೇರು ಮಾರುಕಟ್ಟೆ ವಹಿವಾಟಿನ ಬಗ್ಗೆ ಹೂಡಿಕೆದಾರರಲ್ಲಿ ಅರಿವು ಮೂಡಿಸಲು ಮತ್ತು ಅವರ ದೂರುಗಳನ್ನು ಬಗೆಹರಿಸಲು  ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ದೇಶವ್ಯಾಪಿ ಕರೆ ದರ ಮುಕ್ತವಾದ ಸಹಾಯವಾಣಿ ಸೌಲಭ್ಯ ಮತ್ತು ವಿವಿಧ ಮಾಧ್ಯಮಗಳ ಮೂಲಕ ಪ್ರಚಾರ ನಡೆಸಲು ನಿರ್ಧರಿಸಿದೆ.

ಆರಂಭದಲ್ಲಿ ಸಹಾಯವಾಣಿಯು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಇರಲಿದ್ದು, ಆನಂತರ ಈ ಸೌಲಭ್ಯವನ್ನು ಕನ್ನಡವೂ ಸೇರಿದಂತೆ 14 ಭಾಷೆಗಳಿಗೆ ವಿಸ್ತರಿಸಲಾಗುವುದು. ಷೇರುಪೇಟೆಯಲ್ಲಿ ಹಣ ಹೂಡಿಕೆ ಮಾಡುವುದರಿಂದ ಎದುರಾಗಬಹುದಾದ ನಷ್ಟದ ಸಾಧ್ಯತೆ ಮತ್ತು ಹೂಡಿಕೆದಾರರ ಹಿತಾಸಕ್ತಿ ರಕ್ಷಿಸಲು ‘ಸೆಬಿ’ ಕೈಗೊಳ್ಳುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು. ವಿವಿಧ ಭಾಷೆಗಳಲ್ಲಿ ಅರ್ಧ ಗಂಟೆಯ ಸಾಕ್ಷ್ಯಚಿತ್ರ ನಿರ್ಮಿಸಿ ಟಿವಿ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲು ನಿರ್ಧರಿಸಲಾಗಿದೆ.

ಈ ವರ್ಷ ದೇಶದಾದ್ಯಂತ 5000ದಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲು ಷೇರುಪೇಟೆಗಳಿಗೆ, ಮ್ಯೂಚುವಲ್ ಫಂಡ್‌ಗಳಿಗೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT