ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯಾಘಾತ: ಕೈಪಿಡಿ ಬಿಡುಗಡೆ

Last Updated 15 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿ­ರು­ವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ­ಸಲು ಫೋರ್ಟಿಸ್ ಆಸ್ಪತ್ರೆಯು ‘ಹೃದ­ಯಾ­ಘಾತ  ಮತ್ತು ಆದರಿಂದ ಪಾರಾ­ಗುವ ಬಗೆ’ ಕುರಿತು ಕೈಪಿಡಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಪ್ರಧಾನ ಹೃದ್ರೋಗ ತಜ್ಞ ಡಾ.ವಿವೇಕ ಜವಳಿ ಮಾತನಾಡಿ, ‘ದೇಶದಲ್ಲಿ ಶೇ 80ರಷ್ಟು ಮಂದಿ ಹೃದಯ ಸಂಬಂಧಿತ ರೋಗಗಳಿಂದ ಸಾವನ್ನಪ್ಪುತ್ತಿ­ದ್ದಾರೆ. ಇನ್ನೂ ಹೃದಯಾಘಾತವಾದ ಶೇ 50ರಷ್ಟು ಮಂದಿಗೆ ಸಮರ್ಪಕ ತುರ್ತು ಚಿಕಿತ್ಸೆ ದೊರೆಯುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.

‘ಹೃದಯಾಘಾತದ ಆರಂಭಿಕ ಲಕ್ಷಣಗಳು, ಇದಕ್ಕೆ ಸಂಬಂಧಪಟ್ಟ ಮಿಥ್ಯ, ಚಿಕಿತ್ಸಾ ವಿಧಾನಗಳ ಸಂಪೂರ್ಣ ಮಾಹಿತಿ  ಈ ಕೈಪಿಡಿಯಲ್ಲಿದೆ’ ಎಂದು ಹೇಳಿದರು.

‘ಬಹುತೇಕ ಯುವಜನತೆ ಹೃದ್ರೋಗಕ್ಕೆ ಒಳಗಾಗುತ್ತಿರು­ವುದು ಆತಂಕಕಾರಿ ವಿಚಾರ. ತಂಬಾಕು ಸೇವನೆ ನೇರವಾಗಿ ಹೃದಯದ ಮೇಲೆ ಪರಿಣಾಮ ಬೀರುವುದರಿಂದ ಇದರ ಸೇವನೆಯನ್ನು ನಿಷೇಧಿಸುವ ಅಗತ್ಯವಿದೆ’ ಎಂದು ಅಭಿಪ್ರಾಯ­ಪಟ್ಟರು.

ಹೃದ್ರೋಗ ತಜ್ಞ ಡಾ.ಎಸ್.­ವೆಂಕಟೇಶ, ‘ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡುವುದು ಮುಖ್ಯ­ವಾಗಿದೆ. ಹೃದಯಾಘಾತವಾಗಿ 6 ಗಂಟೆಯ ಒಳಗೆ ಸಮರ್ಪಕ ಚಿಕಿತ್ಸೆ ನೀಡಿದರೆ ರೋಗಿ ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT