ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಕ್ಕಳ ಸಾಕ್ಷರತೆ ಹೆಚ್ಚಳ

Last Updated 30 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ: ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಶಾಲೆಯತ್ತ ಮುಖ ಮಾಡಿರುವುದರಿಂದ ಈ ವರ್ಗದ ಬಾಲ ಕಾರ್ಮಿಕರ ಸಂಖ್ಯೆ ಗಣನೀಯವಾಗಿ ಇಳಿದಿದೆ ಎಂದು 2011ರ ಭಾರತ ಮಾನವ ಅಭಿವೃದ್ಧಿ ವರದಿ ತಿಳಿಸಿದೆ.

ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಆರಂಭಿಸಿರುವ ಅನೇಕ ಯೋಜನೆಗಳು ಫಲ ನೀಡಿರುವುದರಿಂದ ಶಿಕ್ಷಣ ಪಡೆಯುತ್ತಿರುವ ಹೆಣ್ಣ ಮಕ್ಕಳ ಸಂಖ್ಯೆ ಏರಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳನ್ನು ದುಡಿಸಿಕೊಳ್ಳುವುದು ಜಾಸ್ತಿ. ಆದರೆ ಇತ್ತೀಚಿನ ಸಮೀಕ್ಷೆಯ ಪ್ರಕಾರ ಈ ವರ್ಗದ ಬಾಲ ಕಾರ್ಮಿಕರ ಸಂಖ್ಯೆ ಸಾಕಷ್ಟು ಇಳಿದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಶೇ 2.2ರಷ್ಟು ಹೆಣ್ಣು ಮಕ್ಕಳು ಕೆಲಸ ಮಾಡುತ್ತಿದ್ದರೆ, ಶೇ 3ರಷ್ಟು ಗಂಡು ಮಕ್ಕಳು ದುಡಿಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಸರ್ವ ಶಿಕ್ಷಾ ಅಭಿಯಾನದಂತಹ ಯೋಜನೆಗಳನ್ನು ಜಾರಿ ಮಾಡಿದ್ದರಿಂದ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸಾಕ್ಷರರಾಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT