ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಕಾಮಗಾರಿಗೆ 6 ಕೋಟಿ

Last Updated 1 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೊಪ್ಪ: ಶೃಂಗೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಾದು ಹೋಗುವ ಮಲ್ಪೆ- ಮೊಳಕಾಲ್ಮೂರು ರಾಜ್ಯ ಹೆದ್ದಾರಿ 65ರಲ್ಲಿ ಆಯ್ದ ಭಾಗಗಳನ್ನು ರೂ 6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು  ಸಚಿವ ಡಿ.ಎನ್.ಜೀವರಾಜ್ ಹೇಳಿದರು.

 ಇಲ್ಲಿನ ವೀರಭದ್ರ ದೇವಸ್ಥಾನದ ಆವರಣದಲ್ಲಿ ಸೋಮವಾರ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶಕ್ತಿಗಣಪತಿ ದೇವಸ್ಥಾನದಿಂದ ಟೋಲ್‌ಗೇಟ್‌ವರೆಗೆ ಕಾಂಕ್ರೀಟ್ ರಸ್ತೆ ನಿರ್ಮಿಸಲಾವುದು.
ಶೃಂಗೇರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 17 ವಿವಿಧ ರಸ್ತೆಗಳನ್ನು ರೂ 13.87ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು.

 ಕೊಪ್ಪ ಬಸ್ ನಿಲ್ದಾಣದ ಅಭಿವೃದ್ಧಿಯ ವಿಚಾರದಲ್ಲಿ ಸಲ್ಲದ ಟೀಕೆಗಳು ನೋವುಂಟು ಮಾಡಿದೆ ಎಂದರು.
 ಜಿ.ಪಂ.ಅಧ್ಯಕ್ಷೆ ಸುಚಿತಾ ನರೇಂದ್ರ, ತಾ.ಪಂ.ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷ ನಾರಾಯಣ, ಪ.ಪಂ.ಅಧ್ಯಕ್ಷ ಉಮೇಶ್ ಶೇಟ್, ಉಪಾಧ್ಯಕ್ಷ ವನಜಾ ತಂಗವೇಲು, ತಾ.ಪಂ.ಸದಸ್ಯ ಪೂರ್ಣಚಂದ್ರ, ಜಿ.ಪಂ.ಸದಸ್ಯ ರವೀಂದ್ರ ಕುಕ್ಕುಡಿಗೆ, ಅನ್ನಪೂರ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT