ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಸರ್ವೇ ಕಾರ್ಯ ಆರಂಭ

ಪ್ರಾಧಿಕಾರದ ಅಧಿಕಾರಿಗಳ ಭೇಟಿ, ಪರಿಶೀಲನೆ
Last Updated 12 ಡಿಸೆಂಬರ್ 2013, 9:15 IST
ಅಕ್ಷರ ಗಾತ್ರ

ಭರಮಸಾಗರ: ಚತುಷ್ಪಥ ರಸ್ತೆ ನಿರ್ಮಾಣದ ನಂತರ ನಿರ್ಲಕ್ಷ್ಯಕ್ಕೆ ಒಳಗಾಗಿ ಹಾಳಾಗಿದ್ದ ಗ್ರಾಮದಲ್ಲಿನ ಹಳೇ ಹೆದ್ದಾರಿ ಸುಧಾರಣೆಗೆ ಕೊನೆಗೂ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಬುಧವಾರ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ, ರಸ್ತೆ ಸರ್ವೇ ಕಾರ್ಯ ನಡೆಸಿದರು. ಬೈಪಾಸ್‌ ನಿರ್ಮಾಣದ ನಂತರ ಸೂಕ್ತ ನಿರ್ವಹಣೆ ಇಲ್ಲದೆ ಮುಖ್ಯ ರಸ್ತೆಯಲ್ಲಿ ಗುಂಡಿ ಗಳಾಗಿ ಸಂಚಾರ ದುಸ್ತರವಾಗಿತ್ತು.

ರಸ್ತೆ ಅವ್ಯವಸ್ಥೆ ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಗ್ರಾಮಸ್ಥರು ಅನೇಕ ಬಾರಿ ಪ್ರತಿಭಟನೆ ನಡೆಸಿದ್ದರು. ಹೆದ್ದಾರಿ ಪ್ರಾಧಿಕಾರ ಲೋಕೋಪಯೋಗಿ ಇಲಾಖೆಯನ್ನು ಹೊಣೆ ಮಾಡಿದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಇನ್ನೂ ತಮ್ಮ ಇಲಾಖೆಗೆ ಹಸ್ತಾಂತರಗೊಂಡಿಲ್ಲ ಎಂದು ಹೇಳುತ್ತಿದ್ದ ಕಾರಣ ಹೆದ್ದಾರಿ ರಸ್ತೆ ಸುಧಾರಣೆ ಕಾಣದೆ ಸಮಸ್ಯೆ ಹಾಗೇ ಮುಂದುವರಿದಿತ್ತು.

ಇದೀಗ ಎಚ್ಚೆತ್ತುಕೊಂಡ ಹೆದ್ದಾರಿ ಪ್ರಾಧಿಕಾರ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸುವ ಸೂಚನೆ ನೀಡಿದೆ. ಸರ್ವೇ ಕಾರ್ಯ ಮುಗಿದ ನಂತರ ಜ. 22ರಿಂದ ಕಾಮಗಾರಿ ಆರಂಭವಾಗಲಿದೆ. ಗ್ರಾಮದ ಎರಡು ಬದಿಯ ಬೈಪಾಸ್‌ವರೆಗೆ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ  40ಎಂಎಂ ಪದರದ ಡಾಂಬರು ಹಾಕಿ 7 ಮೀ ರಸ್ತೆ ನಿರ್ಮಿಸಲಾಗುವುದು ಎಂದು ಎಂಜಿನಿಯರ್‌ ಸುಧೀರ್‌ರೆಡ್ಡಿ ತಿಳಿಸಿದ್ದಾರೆ.

ಅಧಿಕಾರಿ ಕೈಲಾಸ್‌ಮಂಡಲ್, ಸಿಬ್ಬಂದಿ ಇದ್ದರು. ಸಚಿವ ಎಚ್‌.ಆಂಜನೇಯ ನೀಡಿರುವ ಭರವಸೆಯಂತೆ ಬೈಪಾಸ್‌ವರೆಗೆ ದ್ವಿಪಥ ರಸ್ತೆ ನಿರ್ಮಿಸಿ ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು ಎನ್ನುತ್ತಾರೆ ಗ್ರಾಮಸ್ಥರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT