ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ಗೆ ಕಟ್ಟಾ ಜಾಮೀನು ಅರ್ಜಿ

Last Updated 21 ಅಕ್ಟೋಬರ್ 2011, 5:35 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಾಯುಕ್ತ ವಿಶೇಷ ನ್ಯಾಯಾಲಯವು ವೈದ್ಯಕೀಯ ವರದಿ ಆಧಾರದ ಮೇಲೆ ಜಾಮೀನು ನೀಡಲು ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ ಕೆಐಎಡಿಬಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಶುಕ್ರವಾರ ಹೈಕೋರ್ಟ್‌ಗೆ ಮೋರೆ ಹೋಗಿದ್ದಾರೆ.

ಕಟ್ಟಾ ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯಲು ತಮಗೆ ಜಾಮೀನು ನೀಡುವಂತೆ ಕೋರಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೋಮವಾರ ನ್ಯಾಯಾಲಯವು ತಿರಸ್ಕರಿಸಿತ್ತು.

ಅಲ್ಲದೇ, ನ್ಯಾಯಾಂಗ ಬಂಧನದಲ್ಲೇ ಪೋಲಿಸ್ ನಿಗಾ ಮತ್ತು ಭದ್ರತೆಯಲ್ಲಿ ಭಾರತದ ಯಾವುದೇ ಆಸ್ಪತ್ರೆಯಲ್ಲಿ ಕಟ್ಟಾ ಅವರು ಚಿಕಿತ್ಸೆ ಪಡೆಯುವಂತೆ ನ್ಯಾಯಾಲಯ ಇದೇ ಸಂದರ್ಭದಲ್ಲಿ ಆದೇಶಿಸಿತ್ತು.

ಆಗಸ್ಟ್ 8 ರಿಂದ ನ್ಯಾಯಾಂಗ ಬಂಧನದಲ್ಲಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಜಾಮೀನು ಕೋರಿ ಈ ಹಿಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯನಾಶ ಮತ್ತು ಸಾಕ್ಷ್ಯಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇರುವುದರಿಂದ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT