ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ: ಪೌರಸೇವಾ ನೌಕರರ ರಾಜ್ಯಮಟ್ಟದ ಸಮ್ಮೇಳನ...

Last Updated 22 ಆಗಸ್ಟ್ 2011, 8:25 IST
ಅಕ್ಷರ ಗಾತ್ರ

ಹೊಳಲ್ಕೆರೆ: ಸರ್ಕಾರ ಪೌರಸೇವಾ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ, ಮುಷ್ಕರದ ಬದಲಿಗೆ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷಕೆ. ಕುಳ್ಳೇಗೌಡ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಪೌರಸೇವಾ ನೌಕರರ ಪ್ರಥಮ ರಾಜ್ಯಮಟ್ಟದ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿ ದಿನಗೂಲಿ ನೌಕರರನ್ನು ಕಾಯಂಗೊಳಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಹಂತದ ನೌಕರರಿಗೆ ಮುಂಬಡ್ತಿ ನೀಡಬೇಕು.

5ನೇ ವೇತನ ಆಯೋಗದ ಸೌಲಭ್ಯಗಳು ಎಲ್ಲಾ ನೌಕರರಿಗೂ ಅನ್ವಯವಾಗಬೇಕು. ಇತರೇ ಇಲಾಖೆಯ ನೌಕರರನ್ನು ಸ್ಥಳೀಯ ಸಂಸ್ಥೆಗಳಿಗೆ ನೇಮಕ ಮಾಡಬಾರದು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ತೀರ್ಪು ಉಲ್ಲಂಘಿಸಿ ವರ್ಗಾವಣೆ ಮಾಡುತ್ತಿದ್ದು, ತಕ್ಷಣವೇ ಆದೇಶ ಹಿಂಪಡೆಯಬೇಕು. ಆರನೇ ವೇತನ ಜಾರಿಗೊಳಿಸಬೇಕು ಎಂದರು.

ನಮ್ಮ ಸಂಘ ಸರ್ಕಾರದಿಂದ ಅಧಿಕೃತ ಮಾನ್ಯತೆ ಪಡೆದಿದ್ದು, ರಾಜ್ಯದಲ್ಲಿ ಬೇರೆ ಯಾವ ಪೌರಸೇವಾ ನೌಕರರ ಸಂಘವೂ ಇಲ್ಲ. ಅನಧಿಕೃತವಾಗಿ ಸಂಘ ಸ್ಥಾಪಿಸಿಕೊಂಡಿರುವ ಜಿ.ಎಸ್. ಮಂಜುನಾಥ್ ನೌಕರರನ್ನು ವಂಚಿಸುತ್ತಿದ್ದಾರೆ. ಅವರು ವೈಯಕ್ತಿಕ ಲಾಭಕ್ಕಾಗಿ ಸಂಘವನ್ನು ಬಳಕೆ ಮಾಡಿಕೊಂಡರೇ ಹೊರತು, ನೌಕರರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮಾಜಿ ಶಾಸಕ ಎಚ್. ಆಂಜನೇಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ಬಾಗಲಕೋಟೆ, ತುಮಕೂರು, ಕೋಲಾರ ಮತ್ತಿತರ ಜಿಲ್ಲೆಗಳ ಪದಾಧಿಕಾರಿಗಳಿಂದ ಕಾರ್ಯಕಾರಣಿ ಸಭೆ ನಡೆಯಿತು.ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಎಂ. ಹನುಮಂತಪ್ಪ, ಅಭಿಷೇಕ್ ಆದಿತ್ಯ, ತುಳಸಿದಾಸ್, ರಾಘವೇಂದ್ರ ರಾವ್, ಬಾಲಪ್ಪ, ಮುನಿಯಪ್ಪ, ಶ್ರೀನಿವಾಸ್, ಬೆಂಗಳೂರು ವಿಭಾಗದ ಉಪಾಧ್ಯಕ್ಷ ಡಿ, ಹಾಲಪ್ಪ, ನಾಗರಾಜ್, ಜಯಪ್ರಕಾಶ್, ಗೋಪಾಲಕೃಷ್ಣ, ಪ.ಪಂ. ಅಧ್ಯಕ್ಷೆ ಗೀತಾ ಕೃಷ್ಣಮೂರ್ತಿ, ಲಿಂಗರಾಜು, ಬಿ.ಎಸ್. ರುದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT