ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

Last Updated 11 ಅಕ್ಟೋಬರ್ 2011, 8:10 IST
ಅಕ್ಷರ ಗಾತ್ರ

 ಹುಮನಾಬಾದ್: ಈ ಹಿಂದೆ ಹುಲಸೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುತ್ತಿದ್ದ ದುಬಲಗುಂಡಿ, ಘಾಟಬೋರಾಳ, ಹಳ್ಳಿಖೇಡ(ಬಿ) ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವುದಾಗಿ ಶಾಸಕ ರಾಜಶೇಖರ ಪಾಟೀಲ ತಿಳಿಸಿದರು. ತಾಲ್ಲೂಕಿನ ಘಾಟಬೋರಾಳ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ದುರುಸ್ತಿ ಹಾಗೂ ನವೀಕರಣ ಕಾಮಗಾರಿ ಭೂಮಿಪೂಜೆ ನೆರವೇರಿಸಿ, ಅವರು ಮಾತನಾಡಿದರು.

ಕಳೆದ ಕೆಲವು ತಿಂಗಳ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿದಾಗ ಗ್ರಾಮಸ್ಥರು ಇಟ್ಟಿದ್ದ ಬೇಡಿಕೆ ಗಮನದಲ್ಲಿ ಇಟ್ಟುಕೊಂಡು ವಿಶ್ವಬ್ಯಾಂಕ್ ನೆರವಿನ ರೂ. 59.30ಲಕ್ಷ ಮೊತ್ತದಲ್ಲಿ ಆಸ್ಪತ್ರೆ ದುರುಸ್ತಿ ಹಾಗೂ ನವೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಿ ನನಗೆ ಅಭ್ಯಾಸವಿಲ್ಲ.

ವೈಯಕ್ತಿಕ ದ್ವೇಷ ಸಾಧಿಸುವುದು ನನ್ನ ಜಾಯಮಾನವೂ ಅಲ್ಲ. ್ರಮ ಗಣ್ಯರಾದ ಡಾ.ಪ್ರಕಾಶ ಪಾಟೀಲ, ವೆಂಕಟರಾವ ಪಾಟೀಲ ಗ್ರಾಮಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸಿಕೊಡುವಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ತಂಗುಬಾಯಿ ಮಾಣಿಕರಾವ ಪರಾಂಜಪೆ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಹಾನಂದಾ ಪ್ರಕಾಶ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಅವಿನಾಶ ಕುಲಕರ್ಣಿ, ಎ.ಪಿ.ಎಂ.ಸಿ ಅಧ್ಯಕ್ಷ ನಾರಾಯಣರೆಡ್ಡಿ ಮಂಗಲಗಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಮೋದ ಮುಳೆ, ಆಸ್ಪತ್ರೆ ಆರೋಗ್ಯ ಅಧಿಕಾರಿ ಯುವರಾಜ ಬಿರಾದಾರ, ಪ್ರಮುಖರಾದ ರಾಜಕುಮಾರ ಪಾಟೀಲ, ಹನಮಂತರಾವ, ರಾಮರಾವ ಹಲಸೆ ಮೊದಲಾದ ಗಣ್ಯರು ಇದ್ದರು. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಾಬಾಯಿ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಗಣ್ಯರು ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಸಾವಿತ್ರಿ ಪ್ರಾರ್ಥಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುದೇಶಕುಮಾರ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT