ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹ್ಯಾಂಡ್‌ಬಾಲ್ ಟೂರ್ನಿಗೆ ಚಾಲನೆ

Last Updated 11 ಅಕ್ಟೋಬರ್ 2012, 9:40 IST
ಅಕ್ಷರ ಗಾತ್ರ

ಹಾವೇರಿ: ಬೆಳಗಾವಿ ವಿಭಾಗ ಮತ್ತು ರಾಜ್ಯಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ ಮತ್ತು ಬಾಲ ಕಿಯರ ನಾಲ್ಕು ದಿನಗಳ ಹ್ಯಾಂಡ್‌ಬಾಲ್ ಟೂರ್ನಿಗೆ ನಗರದ ಚನಬಸಪ್ಪ ಮಾಗಾವಿ ಪ್ರೌಢಶಾಲಾ ಆವರಣದಲ್ಲಿ ಬುಧವಾರ ಆರಂಭವಾಯಿತು.

ಚೆಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ನೆಹರೂ ಓಲೇಕಾರ ಅವರು ಮಾತ ನಾಡಿ, ಕ್ರೀಡೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ. ಕ್ರೀಡೆಗಳಲ್ಲಿ ಭಾಗ ವಹಿಸು ವುದು ಮುಖ್ಯ. ಕ್ರೀಡಾಪಟುಗಳು ಸ್ಪರ್ಧಾ ಮನೋಭಾವನೆಯಿಂದ ಕ್ರೀಡೆ ಯಲ್ಲಿ ಪಾಲ್ಗೊಳ್ಳಬೇಕು. ನಿರ್ಣಾ ಯಕರ ನಿರ್ಣಯಗಳಿಗೆ ಕ್ರೀಡಾಪಟು ಗಳು ಗೌರವ ನೀಡಬೇಕು. ಆಗ ಮಾತ್ರ ಕ್ರೀಡೆಗೆ ಹಾಗೂ ಕ್ರೀಡಾಪಟುಗಳಿಗೆ ಗೌರವ ಹೆಚ್ಚಾಗಲಿದೆ ಎಂದರು.

ಕ್ರೀಡಾಜ್ಯೋತಿ ಬೆಳಗಿಸಿದ ಜಿ.ಪಂ. ಉಪಾಧ್ಯಕ್ಷೆ ಗೀತಾ ಅಂಕಸಖಾನಿ ಮಾತ ನಾಡಿ, ಕ್ರೀಡಾಪಟುಗಳು ಉತ್ತಮ ವಾಗಿ ಕ್ರೀಡೆ ಪ್ರದರ್ಶಿಸಿ ರಾಜ್ಯ ಮಟ್ಟ ದಲ್ಲಿ ಸಾಧನೆ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಊರು, ಶಾಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಹ್ಯಾಂಡ್‌ಬಾಲ್ ಪಂದ್ಯಾವಳಿಯ ರಾಷ್ಟ್ರಮಟ್ಟದ ಸ್ಪರ್ಧೆ ಯಲ್ಲಿ ಭಾಗವಹಿಸಿದ ಜಿಲ್ಲೆಯ ಕ್ರೀಡಾ ಪಟುಗಳನ್ನು ಹಾಗೂ ಜಿ.ಪಂ. ನೂತನ ಉಪಾಧ್ಯಕ್ಷೆ ಗೀತಾ ಅಂಕಸಖಾನಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿ ಸಲಾಯಿತು.

ಜ್ಞಾನಗಂಗಾ ಶಿಕ್ಷಣ ಸಮಿತಿ ಅಧ್ಯಕ್ಷ ಜಗದೀಶ ಗೊಡ್ಡೆಮ್ಮಿ, ಗೆಳೆಯರ ಬಳಗದ ಅಧ್ಯಕ್ಷ ಕೃಷ್ಣಾ ಮಂಗಳೂರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಹೋಬಾ ನಾಯಕ ಇತರರು ಪಾಲ್ಗೊಂಡಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಬಿ. ಕೊಡ್ಲಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರಾಮಶೆಟ್ಟಿ ನಿರ್ವಹಿಸಿ, ವಂದಿಸಿದರು.

ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಗೆಳೆಯರ ಬಳಗದ ಜ್ಞಾನ ಗಂಗಾ ಶಿಕ್ಷಣ ಸಮಿತಿಯ ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆ, ಕನ್ನಡ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ  17 ವರ್ಷದೊಳಗಿನ ಬಾಲಕ ವಿಭಾಗದಲ್ಲಿ ಬೆಳಗಾವಿ, ಹಾವೇರಿ, ಧಾರವಾಡ, ಬಾಗಲಕೋಟೆ, ಚಿಕ್ಕೋಡಿ        (ಶೈಕ್ಷಣಿಕ) ಜಿಲ್ಲೆಗಳ ಐದು ತಂಡಗಳು, ಬಾಲಕಿಯರ ವಿಭಾಗದಲ್ಲಿ ಬೆಳಗಾವಿ, ಬಾಗಲಕೋಟೆ, ಹಾವೇರಿ, ಚಿಕ್ಕೋಡಿ ಹಾಗೂ ಧಾರವಾಡ ತಂಡಗಳು ಭಾಗವಹಿಸಿವೆ.

14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಇದೇ ಜಿಲ್ಲೆಗಳ ಐದು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿವೆ.   ಅ. 13 ಮತ್ತು 14ರಂದು ರಾಜ್ಯ ಮಟ್ಟದ ಕ್ರೀಡಾಕೂಟಗಳು ನಡೆಯಲಿವೆ     ಎಂದು ಜಿಲಾ ್ಲದೈಹಿಕ ಶಿಕ್ಷಣಾಧಿಕಾರಿ ಹೋಬಾ ನಾಯಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT