ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘160 ಗ್ರಾಮ ಪಂಚಾಯಿತಿ ಮೇಲ್ದರ್ಜೆಗೆ’

Last Updated 23 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ 160ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯ್ತಿಗಳನ್ನಾಗಿ ಮೇಲ್ದ ರ್ಜೆ­ಗೇರಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್‌ ಸೊರಕೆ ತಿಳಿಸಿದರು.

ಜನಸಂಖ್ಯೆ ಹೆಚ್ಚಳವನ್ನು ಇದಕ್ಕೆ ಮಾನದಂಡವಾಗಿ ಪರಿಗಣಿಸಲು ಉದ್ದೇಶಿಸಲಾಗಿದೆ ಎಂದರು.

ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಸೋಮ ವಾರ ವಿಕಾಸಸೌಧದಲ್ಲಿ ರಾಜೀವ್‌ ಆವಾಸ್‌ ಯೋಜನೆ ಕುರಿತು ಆಯೋಜಿ ಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ನಗರ ಪಾಲಿಕೆಗಳ ಕಾರ್ಯವೈಖರಿ ಯನ್ನು ಮೂರು ತಿಂಗಳಿಗೊಮ್ಮೆ ಮೌಲ್ಯಮಾಪನ ಮಾಡ ಲಾಗುವುದು ಎಂದರು. ಸ್ಥಳೀಯ ಸಂಸ್ಥೆಗಳು ತೆರಿಗೆಗಳನ್ನು ಸಮಪರ್ಕವಾಗಿ ವಸೂಲಿ ಮಾಡುತ್ತಿಲ್ಲ.

ಇದರಿಂದ ಸ್ಥಳೀಯವಾಗಿ ಸಂಪನ್ಮೂಲಗಳನ್ನು ಸಂಗ್ರಹಿಸುವಲ್ಲಿ ವಿಫಲವಾಗುತ್ತಿವೆ. ಇದೇ ರೀತಿ ಯೋಜನೆಗಳು ಸಹ ಸಮರ್ಪಕ ವಾಗಿ ಅನುಷ್ಠಾನ ವಾಗುತ್ತಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಯಾವ ದಿಕ್ಕಿನಲ್ಲಿ ಸಾಗಬೇಕು ಎನ್ನುವ ಬಗ್ಗೆ ಯೋಜನೆ ರೂಪಿಸಲು ಮೌಲ್ಯಮಾಪನ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಯೋಜನೆ ಜಾರಿ: ಕೇಂದ್ರ ಸರ್ಕಾರದ ಸಾಮರ್ಥ್ಯ ವೃದ್ಧಿಸುವ ಯೋಜನೆಯನ್ನು 20 ಪಟ್ಟಣಗಳಲ್ಲಿ ಅನುಷ್ಠಾನ ಗೊಳಿಸಲಾಗುವುದು ಹಾಗೂ ನಗರ ಮತ್ತು ಪಟ್ಟಣಗಳ ಅಭಿವೃದ್ಧಿಗೆ ಆವರ್ತ ನಿಧಿ ಸ್ಥಾಪನೆಗೆ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.

ನಗರಗಳಲ್ಲಿ ಶೇ 31.2 ಜನ
ದೇಶದಲ್ಲಿ ನಗರೀಕರಣ ಹೆಚ್ಚುತ್ತಿದೆ. ರಾಜ್ಯವೂ ಅತಿವೇಗದಲ್ಲಿ ನಗರೀಕರಣಕ್ಕೆ ಒಳಗಾಗುತ್ತಿದೆ. 2011ರ ಜನಗಣತಿ ಪ್ರಕಾರ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 31.2ರಷ್ಟು ಜನರು ನಗರದಲ್ಲಿ ವಾಸಿಸುತ್ತಿ­ದ್ದಾರೆ. 2040ಕ್ಕೆ ಈ ಪ್ರಮಾಣ ಶೇ 50ಕ್ಕೆ ಏರುವ ನಿರೀಕ್ಷೆ ಇದೆ.  ಪ್ರಸ್ತುತ ನಗರ ಪ್ರದೇಶಗಳಲ್ಲಿ ಜನಸಂಖ್ಯೆಯ ಶೇಕಡಾ 26.3ರಷ್ಟು ಮಂದಿ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT