ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂಗವಿಕಲರಿಗೆ ಆತ್ಮವಿಶ್ವಾಸ ಮೂಡಿಸಿ’

ಜಿ.ಪಂ. ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಸಲಹೆ
Last Updated 4 ಡಿಸೆಂಬರ್ 2013, 5:47 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಅಂಗವಿಕಲರಲ್ಲಿ ಆತ್ಮವಿಶ್ವಾಸ ಮೂಡಿಸಿ ಜೀವನದಲ್ಲಿ ಮುಂದೆ ಬರಲು ಅವಕಾಶ ಒದಗಿಸಿಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ತಿಳಿಸಿದರು.

ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂಗವಿಕಲರಿಗೆ ದಯೆ, ಕರುಣೆ, ಅನುಕಂಪ ತೋರಿಸುವ ಬದಲು ಪ್ರೀತಿ, ವಿಶ್ವಾಸ ತೋರಿಸ­ಬೇಕು. ಅವರುಗಳಿಗೆ ಕಾನೂನುಬದ್ಧ ಅವಶ್ಯಕ ಸೌಲಭ್ಯ ಒದಗಿಸಿಕೊಡಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ 13ನೇ ಹಣಕಾಸು ಯೋಜನೆಯಡಿ ಈ ಸಾಲಿಗೆ 1.4 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಎರಡನೆಯ ಕಂತಿನಲ್ಲಿ ಇಷ್ಟೆ ಮೊತ್ತದ ಹಣ ಬಿಡುಗಡೆಯಾಗುತ್ತಿದ್ದು, ಒಟ್ಟು ಹಣದಲ್ಲಿ ಅಂಗವಿಕಲರಿಗೆ ಶೇ.3ರಷ್ಟು ಹಣ ಬಳಕೆ ಮಾಡಿಕೊಳ್ಳಲಾಗುವುದು. ವೈಯಕ್ತಿಕ ಸೌಲಭ್ಯ ನೀಡಲು ಅವಕಾಶ ಇಲ್ಲ. ಸೌಲಭ್ಯ ನೀಡುವ ಕುರಿತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಸದ್ಯದಲ್ಲೆ ವಿನಾಯಿತಿ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರ ವೈಯಕ್ತಿಕ ಸೌಲಭ್ಯ ನೀಡಲು ಅನುಮತಿ ನೀಡಿದರೆ ವಿಕಲಚೇತನರಿಗೆ ಅಗತ್ಯವಿರುವ ಉಪಕರಣಗಳನ್ನು ಖರೀದಿಸಿ ವಿತರಿಸಲಾಗುವುದು. ಅಂಗವಿಕಲರ ಸಾಧನೆ ಬೇರೆಯವರಿಗೆ ಮಾರ್ಗದರ್ಶನವಾಗಬೇಕೆಂದು ತಿಳಿಸಿದರು.

ಆಶಾಕಿರಣ ಅಂಧಮಕ್ಕಳ ಶಾಲೆ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ಮಾತನಾಡಿ, ಅಂಗವಿಕ­ಲರಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ.3ರಿಂದ 5ಕ್ಕೆ ಹೆಚ್ಚಳಗೊಳಿಸಬೇಕೆಂದು ಒತ್ತಾಯಿಸಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಚ್.ಎಸ್.ಕಮಲಾ ಅವರು  ಕಾರ್ಯ ಉದ್ಘಾಟಿಸಿದರು.

ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ ಷಾಟ್‌ಪಟ್‌ ಮಾಡಿ ಅಂಗವಿಕಲರ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಸಿವಿಲ್ ನ್ಯಾಯಾಧೀಶರಾದ ಮಹಾದೇವಯ್ಯ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರಯ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಟೇಶ್, ಪೆಲಿಪ್ ಥೋಮಸ್ ರೊಜರಿಯೋ, ಜಿಲ್ಲಾ ಪಂಚಾಯಿತಿ ಸಿಇಒ ಕರುಣಾಕರ, ನಗರಸಭೆ ಆಯುಕ್ತ ನಾಗಭೂಷಣ್, ವಕೀಲ ಗೋಪಿನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT