ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅವನತಿ ಹಾದಿಯಲ್ಲಿ ಬುಡಕಟ್ಟು ಸಂಸ್ಕೃತಿ’

Last Updated 25 ಸೆಪ್ಟೆಂಬರ್ 2013, 6:21 IST
ಅಕ್ಷರ ಗಾತ್ರ

ಮೊಳಕಾಲ್ಮುರು: ಈ ಭಾಗದ ಅತ್ಯಂತ ಶ್ರೀಮಂತ ಬುಡಕಟ್ಟು ಸಂಪ್ರದಾಯಗಳ ಮೂಲತನವು ತಾಜಾತನ ಕಳೆದುಕೊಳ್ಳುತ್ತಿರುವುದು ವಿಷಾದಕರ ಸಂಗತಿ ಎಂದು ಹಿರಿಯೂರು ವಾಣಿ ಸಕ್ಕರೆ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಶಿವಲಿಂಗಪ್ಪ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಕ್ರೀಡೆ, ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್‌ಕ್ರಾಸ್‌ ಶಾಖೆ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಬುಡಕಟ್ಟು ಸಂಸ್ಕೃತಿಗಳ ಆಚರಣೆ ಸಮಯದಲ್ಲಿ ದೇವರಿಗೆ ಸಂಬಂಧಪಟ್ಟ ಕಾರ್ಯಗಳು ಮಾತ್ರ ಅನಾವರಣವಾಗುತ್ತಿವೆ, ಆದರೆ ಸಂಸ್ಕೃತಿಗೆ ಕಾರಣಕರ್ತರಾದ ವ್ಯಕ್ತಿಗಳ ಪರಿಚಯವಾಗುತ್ತಿಲ್ಲ. ಪದವಿ ಕಾಲೇಜಿನ ಉಪನ್ಯಾಸಕರು ಪಠ್ಯದ ಜತೆಗೆ ತಮ್ಮ ಸುತ್ತಮುತ್ತಲ ಆಚಾರ– ವಿಚಾರ, ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.

ತೀವ್ರ ತೊಂದರೆಯಲ್ಲಿರುವ ಗಡಿಭಾಗದ ಶಿಕ್ಷಣ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ಯಾಕೇಜ್‌ ಹಾಗೂ ಉದ್ಯೋಗದಲ್ಲಿಯೂ ಪ್ರತ್ಯೇಕ ಮೀಸಲಾತಿ ಜಾರಿಗಾಗಿ ಈ ಭಾಗದ ಜನಪ್ರತಿನಿಧಿಗಳು ಸರ್ಕಾರ ಮೇಲೆ ಒತ್ತಡ ತರುವ ಮೂಲಕ ನೆರವಿಗೆ ಬರಬೇಕು ಎಂದರು.

ಕಾಯರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ, ಉತ್ತಮ ಭವಿಷ್ಯ ಪಡೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಬೆಲೆ ತಂದುಕೊಡುವ ಜತೆಗೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಿ ಆರೋಗ್ಯಪೂರ್ಣ ಸಮಾಜ ಸ್ಥಾಪನೆಗೆ ಸಹಕರಿಸಬೇಕು ಎಂದು ಹೇಳಿದರು.

ಪ್ರಾಂಶುಪಾಲ ಕೆ. ಪ್ರಸಾದ್‌ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಬಸವರಾಜು, ಆರ್‌.ಲೀಲಾವತಿ,
ಡಾ.ಕೆ.ವಿ.ಪ್ರಜ್ಞಾ, ಜಿ.ಎಸ್.ರಾಮಪ್ಪ, ಮಂಜುನಾಥ್‌, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಜಗಳೂರಯ್ಯ, ಮಾರನಾಯಕ, ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಪಾರ್ಥಸಾರಥಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT