ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಧಾರ್‌’ ಅಗತ್ಯ: ಮೊಯಿಲಿ

ಬ್ಯಾಂಕ್‌ ಖಾತೆಗೆ ಎಲ್‌ಪಿಜಿ ಸಬ್ಸಿಡಿ ಜಮಾ ನಿಲ್ಲದು
Last Updated 25 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು:  ‘ಆಧಾರ್‌ ಯೋಜನೆ ನಿಲ್ಲುವುದಿಲ್ಲ. ಏಕೆಂದರೆ ಸರ್ಕಾರಿ ಸೌಲಭ್ಯಗಳಿಗೆ ಫಲಾನುಭವಿಗಳನ್ನು ಗುರುತಿಸಲು ಆಧಾರ್‌ ಕಾರ್ಡ್‌ ಅಗತ್ಯವಿದೆ’ ಎಂದು ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಪ್ರತಿಪಾದಿಸಿದರು.

ಸರ್ಕಾರದ ವಿವಿಧ ಯೋಜನೆಗಳಡಿ ಸಬ್ಸಿಡಿ ಪಡೆ ಯಲು ಆಧಾರ್‌ ಕಾರ್ಡ್‌ ಬೇಕಾಗುತ್ತದೆ. ಇದನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡ ಲಾಗುವುದು ಎಂದು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.

ಅಡುಗೆ ಅನಿಲ ಸಬ್ಸಿಡಿಯನ್ನು ನೇರ ನಗದು ಯೋಜನೆ ಯಡಿ ಫಲಾನುಭವಿ ಖಾತೆಗೆ ವರ್ಗಾವಣೆ ಮಾಡುವ ನಿರ್ಧಾರ ದಲ್ಲಿ ಯಾವುದೇ ಬದಲಾ ವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಆಧಾರ್‌ ಮೂಲಕ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಸಬ್ಸಿಡಿ ಹಣ ಜಮಾ ಮಾಡುವುದ ರಿಂದ ಭ್ರಷ್ಟಾಚಾರವನ್ನು ತಡೆಯಬಹುದು. ಇದರಿಂದ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ ಎಂದರು.

ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಅಧ್ಯಕ್ಷ ನಂದನ್‌ ನಿಲೇಕಣಿ, ಸಾಲಿಟರ್‌ ಜನರಲ್‌ ಮೋಹನ್‌ ಪರಾಶರನ್‌ ಅವರೊಂದಿಗೆ ಚರ್ಚೆ ನಡೆಸಿದ್ದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT