ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉತ್ತಮ ಯೋಚನೆಗಳಿಗೆ ಕ್ರೀಡೆ ಸಹಕಾರಿ’

ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟ
Last Updated 17 ಸೆಪ್ಟೆಂಬರ್ 2013, 8:44 IST
ಅಕ್ಷರ ಗಾತ್ರ

ದಾವಣಗೆರೆ: ‘ವಿದ್ಯಾರ್ಥಿ ಜೀವನದಲ್ಲಿ  ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಉತ್ತಮ ಯೋಚನೆಗಳನ್ನು ಹೊಂದಲು ಸಹಕಾರಿ’ ಎಂದು ವಿಧಾನಪರಿಷತ್‌ನ ವಿರೋಧಪಕ್ಷದ ಮುಖ್ಯ ಸಚೇತಕ ಎಲ್‌.ಶಿವಯೋಗಿ ಸ್ವಾಮಿ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆರಂಭವಾದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.

ಸದೃಢ ಶರೀರ ಇದ್ದರೆ ಉತ್ತಮ ವಿಚಾರಗಳು ಮನಸ್ಸಿಗೆ ತುಂಬಿಕೊಳ್ಳಲು ಸಹಕಾರಿಯಾಗುತ್ತದೆ. ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ. ಆದರೆ, ಭಾಗವಹಿಸುವುದು ಮತ್ತು ಗೆಲುವಿನ ಕಡೆ  ಸಾಗಲು ಪ್ರಯತ್ನ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನುಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯ್ತಿಯ ಶಿಕ್ಷಣ ಮತ್ತು ಆರೋಗ್ಯ ಸಮಿತಿಯ ಅಧ್ಯಕ್ಷ ಎಚ್‌.ನಾಗರಾಜ್‌ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು, ಗೆಲುವುಗಳನ್ನು ಸಮಾನಾಂತರವಾಗಿ ಸ್ವೀಕರಿಸಬೇಕು. ಒಂದು ಬಾರಿ ಸೋತವನು ಮತ್ತೊಮ್ಮೆ ಪರಿಪೂರ್ಣನಾಗಿ, ಗೆಲುವು ಸಾಧಿಸಲು ಅವಕಾಶವಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶೀಲಾ ಗದ್ದಿಗೇಶ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳಿಗೆ ಸೀಮಿತವಾಗಿರದೆ, ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸ ಬೇಕು. ಸೋಲುತ್ತೇವೆ ಎಂಬ ಹಿಂಜರಿಕೆ ಯಿಂದ ಕ್ರೀಡೆಗಳಲ್ಲಿ ಭಾಗಹಿಸದೇ ಇರಬಾರದು ಎಂದು ಸಲಹೆ ನೀಡಿದರು.

ಕ್ರೀಡಾಕೂಟವು ಎರಡು ದಿನ ನಡೆಯಲಿದ್ದು, ಜಿಲ್ಲೆಯ ಏಳು ತಾಲ್ಲೂಕುಗಳಿಂದ ಸುಮಾರು 1,200 ಸ್ಪರ್ಧಿಗಳು ಭಾಗವಹಿಸಿದ್ದಾರೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಿ.ಕೆ.ಶಿವಕುಮಾರ್‌ ಸ್ವಾಗತಿಸಿದರು. ಈಶ್ವರಮ್ಮ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪಾಲಿಕೆ ಸದಸ್ಯ ದಿನೇಶ್‌ ಕೆ.ಶೆಟ್ಟಿ, ಸಹನಾ ರವಿ, ನಗರ ಪಾಲಿಕೆ ಮಾಜಿ ಸದಸ್ಯ ಎಚ್‌.ಎಸ್‌.ಲಿಂಗರಾಜ್‌ ಉಪಸ್ಥಿತರಿದ್ದರು.

‘ಕ್ರೀಡಾ ಸಮವಸ್ತ್ರ ನೀಡಿ..’
‘ರಾಜ್ಯಮಟ್ಟದಲ್ಲಿ ಇರುವಂತೆ ಜಿಲ್ಲಾಮಟ್ಟದಲ್ಲೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮತಿ  ಅಧ್ಯಕ್ಷ ಎಚ್‌.ನಾಗರಾಜ್‌ ಅವರು ಶೀಲಾ ಗದ್ದಿಗೇಶ್‌ ಅವರಿಗೆ ಮನವಿ ಮಾಡಿದರು.

ಶೇ 2ರ ಅನುದಾನದಲ್ಲಿ ಜಿಲ್ಲಾಮಟ್ಟದ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಮಾಡಬಹುದು. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು ಗಮನ ಹರಿಸಬೇಕು. ಈ ಬಗ್ಗೆ ಸಿಇಒ ಜತೆ ಚರ್ಚೆ ಮಾಡೋಣ ಎಂದು ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಶೀಲಾ ಗದ್ದಿಗೇಶ್‌, ಜಿಲ್ಲಾ ಪಂಚಾಯ್ತಿ ಸಿಇಒ ಅವರೊಂದಿಗೆ ಈ ನಿಟ್ಟಿನಲ್ಲಿ ಶೀಘ್ರವೇ ಮಾತನಾಡುತ್ತೇನೆ. ಕ್ರೀಡಾಪಟುಗಳಿಗೆ ಅಗತ್ಯವಿರುವ ಸಮವಸ್ತ್ರ ದೊರಕಿಸಿಕೊಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಪಡುವುದಾಗಿ ಭರವಸೆ ನೀಡಿದರು.

ಪಾಲಿಕೆ ಸದಸ್ಯ ದಿನೇಶ್‌ ಕೆ.ಶೆಟ್ಟಿ ಮಾತನಾಡಿ, ಕ್ರೀಡಾ ತರಬೇತುದಾರರಿಗೆ ಮಾಸಿಕ ` 500ವೇತನ ನೀಡಲಾಗುತ್ತಿದ್ದು, ಇದನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT