ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎರಡು ದಿನಗಳಲ್ಲಿ ಲಾರಿ ಮಾಲೀಕರ ಜೊತೆ ಮಾತುಕತೆ’

Last Updated 9 ಜನವರಿ 2014, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮರಳು ತೆಗೆಯುವುದು, ಸಂಗ್ರಹ, ಸಾಗಣೆ ನಿಯಮ ಪರಿಷ್ಕರಣೆ ವಿರೋಧಿಸಿ ಮುಷ್ಕರ ನಡೆಸುತ್ತಿರುವ ಲಾರಿ ಮಾಲೀಕರ ಜೊತೆ ಎರಡು ದಿನಗಳಲ್ಲಿ ಮಾತುಕತೆ ನಡೆಸ­ಲಾಗು­ವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಕಾಂಗ್ರೆಸ್‌ ಕಾರ್ಯಕರ್ತರ ಅಹವಾಲು ಆಲಿಸುವುದಕ್ಕಾಗಿ ಅವರು ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ‘ಮರಳು ಪೂರೈಕೆಗೆ ಸಂಬಂಧಿಸಿದ ಗೊಂದಲ ಕುರಿತು ಲೋಕೋಪ­ಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಜೊತೆ ಚರ್ಚಿಸಿದ್ದೇನೆ. ಎರಡು ದಿನಗಳೊಳಗೆ ನಾನು ಮತ್ತು ಅವರು ಜತೆಗೂಡಿ ಲಾರಿ ಮಾಲೀಕರ ಸಂಘಟನೆಯ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸುತ್ತೇವೆ’ ಎಂದರು.

ನಗರದಲ್ಲಿ ರಸ್ತೆಗಳಲ್ಲಿ ಗುಂಡಿ ಬಿದ್ದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ 240 ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ನಗರದಲ್ಲಿ ₨ 600 ಕೋಟಿ ವೆಚ್ಚದಲ್ಲಿ ತಡೆರಹಿತ ಸಂಚಾರ ವ್ಯವಸ್ಥೆ ಜಾರಿಗೊಳಿಸುವ ಯೋಜನೆ ಇದೆ. ಈ ಪ್ರಸ್ತಾವಕ್ಕೆ ಸಂಪುಟದ ಒಪ್ಪಿಗೆ ದೊರೆತ ತಕ್ಷಣ, ಯೋಜನೆ ಜಾರಿಯಾಗಲಿದೆ’ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಕುರಿತು ಪ್ರಶ್ನಿಸಿದಾಗ, ‘ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಗರದಲ್ಲಿ ಹೈಕಮಾಂಡ್‌ ಯಾರನ್ನೇ ಕಣಕ್ಕಿಳಿಸಿದರೂ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ. ಆಧಾರ್‌ ಮುಖ್ಯಸ್ಥ ನಂದನ್‌ ನಿಲೇಕಣಿ ಸ್ಪರ್ಧಿಸಿದರೂ ಅವರ ಪರ ಕೆಲಸ ಮಾಡುತ್ತೇವೆ. ಈ ವಿಚಾರದಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT