ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ’

Last Updated 5 ಡಿಸೆಂಬರ್ 2013, 8:46 IST
ಅಕ್ಷರ ಗಾತ್ರ

ಚನ್ನಪಟ್ಟಣ: ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಮರಿದೇವ್ರು ಅಭಿಪ್ರಾಯಪಟ್ಟರು.

ಪಟ್ಟಣದ ನವಚೇತನ ಸಂಸ್ಥೆ ಆಶ್ರ ಯದಲ್ಲಿ ಮಂಗಳವಾರಪೇಟೆಯ ಅರುಣಾ ಕ್ರೀಡಾ ಸಂಸ್ಥೆಯ ಆವರಣ ದಲ್ಲಿ ಇತ್ತೀಚಿಗೆ ಏರ್ಪಡಿಸಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವ ಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದೇಶಿ ಕ್ರೀಡೆಗಳಿಗೆ ಸೂಕ್ತ ಪ್ರೋತ್ಸಾಹ ದೊರೆ ಯುತ್ತಿಲ್ಲ. ಇದರಿಂದ ದೇಶಿ ಕ್ರೀಡೆಗಳು ನಶಿಸುತ್ತಿವೆ ಎಂದು ವಿಷಾದಿಸಿದರು.

ದೇಶಿ ಕ್ರೀಡೆಗಳಾದ ಕಬಡ್ಡಿ, ಕೊಕ್ಕೋ, ಹಾಕಿ, ಚದುರಂಗ ಮುಂತಾ ದವುಗಳ ಬಗ್ಗೆ ಸಂಘ ಸಂಸ್ಥೆ ಗಳು ಯುವ ಸಮುದಾಯಕ್ಕೆ ಅರಿವು ಮೂಡಿಸುವ ಮೂಲಕ ಅವರಲ್ಲಿ ಕ್ರೀಡಾ ಪ್ರೇಮವನ್ನು ಬಿತ್ತುವ ಕಾರ್ಯಕ್ಕೆ ಮುಂದಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಎಂ.ಎಲ್. ಶಂಕರಪ್ಪ ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗ ಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿ ಸಲಾಯಿತು. ಅಂತರರಾಷ್ಟ್ರೀಯ ಕ್ರೀಡಾ ಪಟು ಬಿ.ಸಿ.ರಮೇಶ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ವೀರೇಗೌಡ, ಮಾಜಿ ನಗರಸಭಾ ಉಪಾಧ್ಯಕ್ಷ ಕೆ.ಎಲ್.ಕುಮಾರ್, ನಗರಸಭಾ ಸದ ಸ್ಯರಾದ ಪುರುಷೋತ್ತಮ್, ವಿಷ ಕಂಠ ಮೂರ್ತಿ, ಕಲ್ಪವೃಕ್ಷ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಸ್.ಸಿ.ಶೇಖರ್ ಇತರರು ಹಾಜರಿದ್ದರು.

ಕದಂಬ ಸೈನ್ಯದ ಜಿಲ್ಲಾಧ್ಯಕ್ಷ ಎಸ್.ಶಿವಕುಮಾರ್ ಸ್ವಾಗತಿಸಿದರು. ನವಚೇತನ ಕಲಾ ಬಳಗದ ಕಾರ್ಯ ದರ್ಶಿ ದೇವೇಂದ್ರ ಕುಮಾರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT