ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ’

Last Updated 3 ಏಪ್ರಿಲ್ 2014, 9:02 IST
ಅಕ್ಷರ ಗಾತ್ರ

ಜೇವರ್ಗಿ: ‘ಕಳೆದ 5ವರ್ಷಗಳಲ್ಲಿ ಪಕ್ಷವು ಕೈಗೊಂಡ ಅಭಿವೃದ್ಧಿ ಕಾರ್ಯ­ಗಳೇ ಪಕ್ಷದ ಗೆಲುವಿಗೆ ಶ್ರೀರಕ್ಷೆ­ಯಾ­ಗಲಿವೆ. ಈ ನಿಟ್ಟಿನಲ್ಲಿ ಪಕ್ಷದ ಮುಖಂಡ­ರು, ಕಾರ್ಯಕರ್ತರು ಇನ್ನಷ್ಟು ಶ್ರಮಿ­ಸುವುದು ಅಗತ್ಯ’ ಎಂದು ಗುಲ್ಬರ್ಗ ಲೋಕ­ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿ­ದರು.

ಅವರು ತಾಲ್ಲೂಕಿನ ಆಂದೋ­ಲಾದಲ್ಲಿ ಜೇವರ್ಗಿ ಹಾಗೂ ಯಡ್ರಾಮಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವತಿಯಿಂದ ಬುಧವಾರ ಆಯೋಜಿಸಿದ್ದ ಲೋಕ­ಸಭಾ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ರಮವನ್ನು ಉದ್ಘಾ­ಟಿಸಿ ಮಾತನಾಡುತ್ತಿದ್ದರು.

’ಲೋಕಸಭಾ ಚುನಾವಣೆ ದೇಶದ ಭವಿಷ್ಯ ನಿರ್ಧರಿಸಲಿದೆ. ಕಳೆದ 5ವರ್ಷ­ಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ಹಿತ­ದೃಷ್ಟಿಯಿಂದ ಜನಪರ ಕಾರ್ಯ­ಗಳನ್ನು ಮಾಡಿದ್ದೇನೆ.ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ’ ಎಂದರು.

’ನಾನು ಮತ್ತು ಮಾಜಿ ಮುಖ್ಯ­ಮಂತ್ರಿ ಧರ್ಮಸಿಂಗ್‌ ಹೈದರಾ­ಬಾದ್–ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 371(ಜೆ)ಕಲಂಗೆ ತಿದ್ದುಪಡಿ ತರಲು ನಿರಂತರವಾಗಿ ಶ್ರಮಿಸಿದ್ದೇವೆ. ಬಿಜೆಪಿ ಮುಖಂಡರು 371ನೇ ಕಲಂ ತಿದ್ದು­ಪಡಿಗೆ ವಿರೋಧಿಸಿದ್ದರು. ಯುಪಿಎ ಸರ್ಕಾರದ ಸಾಧನೆಗಳನ್ನು ತಾವು ಮಾಡಿರುವ ಕಾರ್ಯಗಳು ಎಂದು ಹೇಳಿಕೊಳ್ಳುತ್ತಿರುವ ರಾಜ್ಯ ಬಿಜೆಪಿ ನಾಯಕರು ಮೋದಿ ಹೆಸರಿನಲ್ಲಿ ಮತಯಾಚಿಸುತ್ತಿದ್ದಾರೆ. ಧರ್ಮ­ಸಿಂಗ್‌, ಮಲ್ಲಿಕಾರ್ಜುನ ಖರ್ಗೆ ಏನು ಮಾಡಿದ್ದಾರೆ?ಎಂದು ಪ್ರಶ್ನಿಸುತ್ತಾರೆ. ಆದರೆ ನಾವು ಮಾಡಿದ ಜನಪರ ಕಾರ್ಯಗಳು ಅವರ ಕಣ್ಣಿಗೆ ಕಾಣುತ್ತಿಲ್ಲ’ ಎಂದು ಖರ್ಗೆ ಬಿಜೆಪಿ ನಾಯಕರ ಧೋರಣೆಯನ್ನು ಕಟು­ವಾಗಿ ಟೀಕಿಸಿದರು.

ಸಭೆಯನ್ನು ಉದ್ದೇಶಿಸಿ ಶಾಸಕ ಡಾ.ಅಜಯಸಿಂಗ್‌, ವಿಧಾನ ಪರಿಷತ್‌ ಸದಸ್ಯ ಅಲ್ಲಮಪ್ರಭು ಪಾಟೀಲ್, ಜೇವ­ರ್ಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಿಂಗಣ್ಣ ನೇರಡಗಿ, ಆಂದೋಲಾ ಜಿಲ್ಲಾ ಪಂಚಾ­ಯಿತಿ ಸದಸ್ಯ ಗುರುಲಿಂಗಪ್ಪಗೌಡ ಪಾಟೀಲ್‌ ಇತರರು ಮಾತ­ನಾಡಿದರು.

ಪ್ರಚಾರ ಸಭೆಯಲ್ಲಿ ಯಡ್ರಾಮಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಮೃತ­ಗೌಡ ವಡಗೇರಾ, ಚಂದ್ರಶೇಖರ ಹರನಾಳ, ಶಾಂತಗೌಡ ದುಮ್ಮದ್ರಿ, ಖಾಸಿಂಪಟೇಲ್‌ ಮುದವಾಳ, ಬಸ­ವಣ್ಣಪ್ಪ ಗೌನಳ್ಳಿ, ರಾಜಶೇಖರ ಸೀರಿ, ಆಂದೋಲಾ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಗ್ರಾಮಗಳ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT