ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ’

Last Updated 10 ಡಿಸೆಂಬರ್ 2013, 5:04 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣ ಮುಗಿಸಬೇಕು,  ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು, ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಶಾಸಕ ಕೆ.ಬಿ.ಕೋಳಿವಾಡ ಹೇಳಿದರು.

ತಾಲ್ಲೂಕಿನ  ಇಟಗಿ ಗ್ರಾಮದ ಬಳಿ ಬಿರೂರು –ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ₨ 60 ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಜ್ಯೋತಿ ಎಸ್‌.ರಾಮಲಿಂಗಣ್ಣನವರ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಗಣೇಶ ಬಿಲ್ಲಾಳ, ಎಪಿಎಂಸಿ ಮಾಜಿ ಅಧ್ಯಕ್ಷ ಸಣ್ಣತಮ್ಮಪ್ಪ ಬಾರ್ಕಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್‌.ಎಸ್‌. ರಾಮಲಿಂಗಣ್ಣನವರ, ಕೃಷ್ಣಪ್ಪ ಕಂಬಳಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರವೀಂದ್ರಗೌಡ ಪಾಟೀಲ, ಮಂಜುನಾಥ ಮಠಪತಿ, ಇಕ್ಬಾಲ್‌ ರಾಣೆಬೆನ್ನೂರು ಹಾಗೂ  ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸುಭಾನ್‌, ಜಗದೀಶ ಕೋಳಿವಾಡ, ಸಂಗನಗೌಡ್ರ  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT