ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಕ್ಷದೊಳಗಿನ ಸಮಸ್ಯೆಗಳನ್ನು ಬಿಜೆಪಿ ಬಗೆಹರಿಸಿಕೊಳ್ಳಲಿ’

Last Updated 23 ಡಿಸೆಂಬರ್ 2013, 9:25 IST
ಅಕ್ಷರ ಗಾತ್ರ

ಹುಕ್ಕೇರಿ: ಕಾಂಗ್ರೆಸ್ ಪಕ್ಷ ಧೂಳಿಪಟವಾಗಲಿದೆ ಎಂದು ಹೇಳಿರುವ ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ತಮ್ಮ ಪಕ್ಷದ ಸ್ಥಿತಿಗತಿ ಬಗ್ಗೆ ನೋಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದರು.

ಅವರು ಸಂಕೇಶ್ವರದಲ್ಲಿ ಮಾಜಿ ಸಚಿವ ಎ.ಬಿ.ಪಾಟೀಲ ಅವರ ಷಷ್ಠಿಪೂರ್ತಿ ಸಮಾರಂಭದಲ್ಲಿ ಪಾಲ್ಗೊಂಡು ಹುಕ್ಕೇರಿಗೆ ಆಗಮಿಸಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೆ.ಎಸ್.ಈಶ್ವರಪ್ಪ ಅವರು ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೇಳಿರುವುದಕ್ಕೆ  ಮೊದಲು ಬಿಜೆಪಿ ಪಕ್ಷದೊಳಗಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿ ಎಂದು ಪರಮೇಶ್ವರ್‌ ಪ್ರತಿಕ್ರಿಯಿಸಿದರು.

ತಮ್ಮ ಭಾಷಣದಲ್ಲಿ ‘ನಾನು ಇನ್ನೂ ಒಂದು ಮೆಟ್ಟಿಲು ಏರಬೇಕಾಗಿದೆ ಹಾಗೂ ಎ.ಬಿ.ಪಾಟೀಲರೂ ಕೂಡಾ ’ ಎಂದು ಹೇಳಿದ್ದರ ಹಿಂದಿನ ಉದ್ದೇಶ ಮುಖ್ಯಮಂತ್ರಿ ಹುದ್ದೆಗೇರುವುದೇ ಎನ್ನುವ ಪ್ರಶ್ನೆಗೆ  ಹಾಗೇನಿಲ್ಲ, ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವ ಉದ್ದೇಶ ತಮ್ಮದಾಗಿದೆ ಎಂದು ಹಾರಿಕೆಯ ಉತ್ತರ ನೀಡಿದರು.

ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷೀ ಹೆಬ್ಬಾಳಕರ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT