ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಡವರಿಗೆ ಉನ್ನತ ಶಿಕ್ಷಣ ಮರೀಚಿಕೆ’

Last Updated 22 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ತಲಘಟ್ಟಪುರ: ‘ನಮ್ಮ ದೇಶವು ಅಟೋಮೊಬೈಲ್‌, ಕಂಪ್ಯೂಟರ್‌ ಶಿಕ್ಷಣದಲ್ಲಿ ಇಂಗ್ಲೆಂಡ್‌, ಫ್ರಾನ್ಸ್‌ ರಾಷ್ಟ್ರ­ಗಳಿಗೆ ಸರಿಸಾಟಿಯಾಗಿ ಪ್ರಗತಿಯ ಹಾದಿಯಲ್ಲಿದೆ. ಆದರೆ, ಬಡವರಿಗೆ ಉನ್ನತ ಶಿಕ್ಷಣ ನೀಡುವಲ್ಲಿ ನಾವು ವಿಫಲರಾಗಿದ್ದೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಳವಳ ವ್ಯಕ್ತಪಡಿಸಿದರು.

ಸೋಮನಹಳ್ಳಿ ಬಳಿ ಆಚಾರ್ಯ ಪಾಠಶಾಲಾ ಪಾಲಿಟೆಕ್ನಿಕ್‌ನ ‘ಅನಂತ­ಜ್ಞಾನ ಗಂಗೋತ್ರ’ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಸ್ತು­ಶಾಸ್ತ್ರ, ಅಟೋಮೊಬೈಲ್‌, ಕಂಪ್ಯೂಟರ್‌ ಸೈನ್ಸ್‌ ವಿಭಾಗಗಳ ನೂತನ ಕಟ್ಟಡಗಳನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
‘ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣ ಮನೋಭಾವ ಬಿಟ್ಟು ಗ್ರಾಮೀಣ ಪ್ರದೇಶದ ಕಡುಬಡವರಿಗೆ ಸಂಸ್ಥೆಗಳಲ್ಲಿ ಪ್ರವೇಶಾವಕಾಶ ಕಲ್ಪಿಸ­ಬೇಕು. ಆಗ ಮಾತ್ರ  ಭಾರತ ಬಲಿಷ್ಠ, ರಾಷ್ಟ್ರವಾಗಲು ಸಾಧ್ಯ’ ಎಂದರು. ಸಂಸ್ಥೆಯ ಆಡಳಿತಾಧಿಕಾರಿ ಬಿ.ವಿ.ರೆಡ್ಡಿ, ಆಡಳಿತ ಮಂಡಳಿಯ ಮೋಹನ್‌ದೇವ್‌ ಆಳ್ವ, ರಾಜಶೇಖರಪ್ಪ, ಸಿ.ನಾಗರಾಜ್‌, ಪ್ರಾಂಶುಪಾಲರಾದ ಎಸ್‌.ಶೈಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT