ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಾಲಗಂಗಾಧರನಾಥ ಸ್ವಾಮೀಜಿ ಕೊಡುಗೆ ಸ್ಫೂರ್ತಿ’

Last Updated 10 ಜನವರಿ 2014, 6:48 IST
ಅಕ್ಷರ ಗಾತ್ರ

ಶೃಂಗೇರಿ: ಧರ್ಮ, ವಿದ್ಯೆ ಮತ್ತು ಸಂಪತ್ತಿನ ವಿಕೇಂದ್ರೀಕರಣಕ್ಕಾಗಿ ಆದಿಚುಂಚನಗಿರಿ ಪೀಠದ ಬಾಲಗಂಗಾ ಧರನಾಥ ಸ್ವಾಮೀಜಿ ನೀಡಿದ ಕೊಡುಗೆ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ಆದಿಚುಂಚನಗಿರಿ ಶಾಖಾ ಮಠದಲ್ಲಿ ಗುರುವಾರ ನಡೆದ ಚುಂಚೋತ್ಸವ ಕಾರ್ಯಕ್ರಮಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿ ಅನಾವರಣ ಮಾಡಿ ಆಶೀರ್ವಚನ ನೀಡಿದ ಅವರು, ಸಮಾಜದ ಉನ್ನತಿಗಾಗಿ ಬಹುಮುಖ ಸೇವೆಯನ್ನು ನೀಡಿದ ಬಾಲ ಗಂಗಾಧರನಾಥ ಸ್ವಾಮೀಜಿ ವಿದ್ಯಾಸಂಸ್ಥೆ ಗಳನ್ನು ಸ್ಥಾಪಿಸುವ ಮೂಲಕ ನಾಡಿನೆಲ್ಲಡೆ ಜ್ಞಾನದ ಜ್ಯೋತಿಯನ್ನು ಬೆಳಗಿದರು. ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದರೊಂದಿಗೆ ಶಿಕ್ಷಣ, ವನ ಸಂವರ್ಧನೆ, ಜಾನಪದ ಕಲೆಗಳಿಗೆ ಪ್ರೋತ್ಸಾಹ, ವೈದ್ಯಕೀಯ ಸೇವೆ, ಗೋರಕ್ಷಣೆ ಮುಂತಾದ ಸಾಮಾ ಜಿಕ ಕಾರ್ಯಗಳಲ್ಲಿ ಅವರು ಹಾಕಿ ಕೊಟ್ಟ ಮಾರ್ಗ ಅನುಕರಣೀಯ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತ ನಾಡಿದ ಆದಿಚುಂಚನಗಿರಿ ಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜ್ಞಾನ ಪ್ರಸಾರದಿಂದ ಸಮಾಜದ ಉನ್ನತಿ ಎಂದು ನಂಬಿ ಮುಂದುವರಿದ ಬಾಲಗಂಗಾಧರನಾಥ ಸ್ವಾಮೀಜಿ ಜ್ಞಾನ ಪ್ರಸಾರಕ್ಕಾಗಿ ಶಿಕ್ಷಣ ಕ್ಷೇತ್ರವನ್ನು ಆರಿಸಕೊಂಡು ಈ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದರು. ಅಸಂಖ್ಯಾತ ವಿದ್ಯಾರ್ಥಿ ಗಳ ಭವಿಷ್ಯದ ಕನಸನ್ನು ನನಸು ಮಾಡಿದ ಕೀರ್ತಿ ಬಾಲಗಂಗಾ ಧರನಾಥ ಸ್ವಾಮೀಜಿ ಯವರಿಗೆ ಸಲ್ಲುತ್ತದೆ. ಅವರ ಮಾರ್ಗ ದರ್ಶನದಲ್ಲಿ ನಾವು ಮನ್ನೆಡೆಯೋಣ ಎಂದರು.

ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠದ ಸ್ವಾಮೀಜಿಗಳು, ಪೊಲೀಸ್‌ ಇಲಾಖೆಯ ನಿವೃತ್ತ ಸಹ ನಿರ್ದೇಶಕ ಕೆ.ವಿ.ಆರ್‌. ಠ್ಯಾಗೂರ್‌, ಹಿರಿಯ ಚಲನಚಿತ್ರ ನಟ ಸಿ.ಎಚ್‌. ಲೋಕ ನಾಥ್‌, ನಟಿ ಗಿರಜಾ ಲೋಕೇಶ್‌, ಹಾಸ್ಯ ಕಲಾವಿದ ಪ್ರೊ. ಕೃಷ್ಣೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಇದ್ದರು.

ಇದೇ ಸಂದರ್ಭದಲ್ಲಿ ಪುಷ್ಪಾರ್ಚನೆ ಮೂಲಕ ಬಾಲಗಂಗಾಧರನಾಥ ಸ್ವಾಮೀಜಿ ಅವರ 70ನೇ ಜಯಂತಿ ಆಚರಿಸಲಾಯಿತು. ಬಿಜಿಎಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದವು. ಕನ್ನಡ ದೀಪೋತ್ಸವದ ಪ್ರಯುಕ್ತ ಸಿಡಿಮದ್ದು ಪ್ರದರ್ಶನ ಏರ್ಪಡಿಸಲಾಗಿತ್ತು.

ಮನ ಸೆಳೆದ ನೃತ್ಯರೂಪಕ
ಆದಿಚುಂಚನಗಿರಿ ಶಾಖಾ ಮಠದ ಬಿಜಿಎಸ್‌ ವೇದಿಕೆಯಲ್ಲಿ ಗುರುವಾರ ಚುಂಚೋತ್ಸವ ಕಾರ್ಯ ಕ್ರಮಕ್ಕೆ ಅದ್ದೂರಿ ಚಾಲನೆ ನೀಡಲಾ ಯಿತು. ಆದಿಚುಂಚನಗಿರಿ ಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ದೀಪ ಬೆಳೆಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಭವ್ಯವಾದ ವೇದಿಕೆಯಲ್ಲಿ ಬಿಜಿಎಸ್‌ ಶಾಲೆ ವಿದ್ಯಾರ್ಥಿಗಳಿಂದ ಮೂಡಿಬಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ಶಾಲೆ ವಿದ್ಯಾರ್ಥಿಗಳು ಪ್ರದರ್ಶಿಸಿದ ಬಾಲ ಗಂಗಾಧರನಾಥ ಸ್ವಾಮೀಜಿ ಅವರ ಸಾಧನೆಗಳ ನೃತ್ಯರೂಪಕ ಜನರ ಮೆಚ್ಚುಗೆಗೆ ಪಾತ್ರವಾಯಿತು.ಬಿಜಿಎಸ್‌ ಪರಿಸರದ ವಿದ್ಯುದೀಪಾಲಂ ಕಾರ, ಕನ್ನಡ ದೀಪೋತ್ಸವ, ಸಿಡಿ ಮದ್ದು ಪ್ರದರ್ಶನ ಪ್ರಶಂಸೆಗೆ ಪಾತ್ರವಾಯಿತು.  

ನಿರ್ಮಲಾನಂದನಾಥ ಸ್ವಾಮೀಜಿಗೆ ಅದ್ದೂರಿ ಸ್ವಾಗತ
ಶೃಂಗೇರಿ: ಆದಿಚುಂಚನಗಿರಿ ಶಾಖಾ ಮಠದಲ್ಲಿ ಗುರುವಾರ ಚುಂಚೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಆದಿ ಚುಂಚನಗಿರಿ ಸಂಸ್ಥಾನದ ಪೀಠಾ ಧ್ಯಕ್ಷ ನಿರ್ಮಾಲಾನಂದನಾಥ ಸ್ವಾಮೀಜಿ ಅವರಿಗೆ ಅದ್ದೂರಿ ಸ್ವಾಗತ ನೀಡಲಾ ಯಿತು.

ಶಾಖಾ ಮಠದಿಂದ  ಬಿಜಿಎಸ್‌ ವೇದಿಕೆಯತ್ತ ಆಗಮಿಸಿದ ಸ್ವಾಮೀಜಿ ಅವರನ್ನು ಛತ್ರಿ, ಚಾಮರ, ಕೊಂಬು, ಕಹಳೆಯೊಂದಿಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು. ಇದೇ ಸಂದರ್ಭದಲ್ಲಿ ಅವರು ಭೈರವಜ್ಯೋತಿ ಸ್ಥಾಪನೆಯನ್ನು ನೆರವೇರಿಸಿದರು. ಯುವ ಒಕ್ಕಲಿಗ ಸಂಘದ ಕಾರ್ಯಕರ್ತರು ಬಾಲ ಗಂಗಾಧರನಾಥ ಸ್ವಾಮೀಜಿ ಅವರ ಪಾದುಕೆ ಹಾಗೂ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಹೊತ್ತು ತಂದು ವೇದಿಕೆಯಲ್ಲಿ ಪ್ರತಿಷ್ಠಾಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT