ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿಯಲ್ಲಿ ಸ್ವಾರ್ಥ ರಾಜಕಾರಣ’

Last Updated 22 ಮಾರ್ಚ್ 2014, 9:31 IST
ಅಕ್ಷರ ಗಾತ್ರ

ಉಡುಪಿ: ‘ಬಿಜೆಪಿಯಲ್ಲಿ ಸ್ವಾರ್ಥ ರಾಜಕಾರಣ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಗಳನ್ನು ಆ ಪಕ್ಷದ ಮುಖಂಡರೇ ಸೋಲಿಸಲು ತಂತ್ರ ಮಾಡಿದ್ದಾರೆ’ ಎಂದು ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಧನಂಜಯ್‌ ಕುಮಾರ್‌ ಹೇಳಿದರು.

ಉಡುಪಿಯಲ್ಲಿ ಶುಕ್ರವಾರ ಪತ್ರಿಕಾ­ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅನಂತ್‌ ಕುಮಾರ್‌ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.­ಯಡಿ­ಯೂರಪ್ಪ, ಯಡಿಯೂರಪ್ಪ ಅವರನ್ನು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಮತ್ತು ಉಡುಪಿಯ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ಕಾರ್ಕಳ ಶಾಸಕ ವಿ.ಸುನಿಲ್‌ ಕುಮಾರ್‌ ಸೋಲಿಸಲಿ­ದ್ದಾರೆ ಎಂದು ಹೇಳಿದರು.

ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಅವರು ಗುಜರಾತ್‌ನ ಗಾಂಧಿ­ನಗರ ಕ್ಷೇತ್ರದಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲಿಂದ ಸ್ಪರ್ಧಿಸಿದರೆ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರೇ ತಮ್ಮನ್ನು ಸೋಲಿಸಬಹುದು ಎಂಬ ಭಯ ಇದಕ್ಕೆ ಕಾರಣ ಎಂದರು.
ಐದು ಬಾರಿ ಸಂಸದರಾಗಿರುವ ಅನಂತ್‌ ಕುಮಾರ್‌ ಅವರು ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಅವರು ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಶಾಸಕರಾದ ಮಧು ಬಂಗಾರಪ್ಪ, ಬಿ.ಬಿ.ನಿಂಗಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT