ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ’

Last Updated 25 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಳಗಾವಿ: ‘ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ನವೆಂಬರ್‌ ತಿಂಗಳಿನಲ್ಲಿ 10 ದಿನಗಳ ಅವಧಿಯ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ’ ಎಂದು ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಹೇಳಿದರು.

‘ನವೆಂಬರ್‌ 11ರಿಂದ ಅಧಿವೇಶನ ನಡೆಸುವ ಕುರಿತು ಸಲಹೆ ನೀಡಿದ್ದು, ಈ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ’ ಎಂದು  ಶಂಕರಮೂರ್ತಿ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಅಧಿವೇಶನ ಕುರಿತು ಈಗಾಗಲೇ ಸದನ ಕಲಾಪಗಳ ಸಮಿತಿಯು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿದೆ. ಈ ಕುರಿತು ಅಂತಿಮವಾಗಿ ನಿರ್ಣಯ ಕೈಗೊಂಡು, ವಿಧಾನಸಭಾಧ್ಯಕ್ಷರು, ಸಭಾಪತಿ ಜತೆ  ಚರ್ಚಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಿದೆ’ ಎಂದರು.

ಪ್ರಸಕ್ತ ವರ್ಷ ಈವರೆಗೆ 32 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT