ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೆಳಗಾವಿಯಲ್ಲಿ ನಡೆದದ್ದು ನೀರಸ ಅಧಿವೇಶನ’

Last Updated 7 ಡಿಸೆಂಬರ್ 2013, 8:19 IST
ಅಕ್ಷರ ಗಾತ್ರ

ಧಾರವಾಡ: ‘ಬೆಳಗಾವಿಯ ಸುವರ್ಣ­ಸೌಧದಲ್ಲಿ ನಡೆದ ಪ್ರಸಕ್ತ ವರ್ಷದ ಚಳಿಗಾಲದ ಅಧಿವೇಶನದಲ್ಲಿ. ಕೃಷಿ ಮತ್ತು ನೀರಾವರಿಗೆ ಸಂಬಂಧಿ­ಸಿದಂತೆ ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಸ್ಪಷ್ಟ ನಿರ್ಧಾರ ಹೊರ­ಬರಲಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಎಚ್‌.ಡಿ.­ಕುಮಾರ­ಸ್ವಾಮಿ ಅಸಮಾ­ಧಾನ ವ್ಯಕ್ತಪಡಿಸಿದರು.

ಇಲ್ಲಿನ ಶಾಸಕ ಎನ್‌.ಎಚ್‌.­ಕೋನರಡ್ಡಿ ಅವರ ನಿವಾಸದಲ್ಲಿ ಶುಕ್ರ­ವಾರ ಔತಣಕೂಟದ ಬಳಿಕ ಸುದ್ದಿಗಾರ­ರೊಂದಿಗೆ ಮಾತನಾಡಿದ ಅವರು, ‘ವೈಯ­ಕ್ತಿಕವಾಗಿ ಒಬ್ಬ ವಿರೋಧ ಪಕ್ಷದ ನಾಯ­ಕನಾಗಿ ಜವಾಬ್ದಾರಿಯಿಂದ ನಾನು ಅಧಿವೇಶನದಲ್ಲಿ ಕೆಲಸ ಮಾಡಿ­ದ್ದೇನೆ. ಈ ಕೆಲಸ ನನಗೆ ತೃಪ್ತಿ ತಂದಿದೆ. ಸದನದ ಕಲಾಪದಲ್ಲಿ ಕೆಲವೊಂದಿಷ್ಟು ವಿಚಾರಗಳ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೇನೆ. ಆದರೆ, ಕಾಂಗ್ರೆಸ್‌ ಸರ್ಕಾ­ರದಿಂದ ಇದಕ್ಕೆ ಪೂರಕವಾದ ಸಕಾರಾ­ತ್ಮಕ ಸ್ಪಂದನೆ ದೊರೆತಿಲ್ಲ. ಈ ಅಧಿವೇಶನ ನಿರಸವಾಗಿ ನಡೆಯಿತು’ ಎಂದರು.

‘ರಾಜ್ಯದ ಹಲವಾರು ಭಾಗಗಳಲ್ಲಿ ಈ ವರ್ಷ ಉತ್ತಮ ಮಳೆಯಾಗಿದೆ. ಅಲ್ಲದೇ ರೈತರು ಉತ್ತಮ ಬೆಳೆಗಳನ್ನು ಬೆಳೆದಿದ್ದಾರೆ. ಆದರೆ, ರೈತರು ಬೆಳೆದ ಬೆಳೆಗಳಿಗೆ ರಾಜ್ಯ ಸರ್ಕಾರದಿಂದ ಉತ್ತಮ­ವಾದ ಲಾಭಾಂಶ ದೊರಕು­ತ್ತಿಲ್ಲ. ಕಬ್ಬಿಗೆ ರಾಜ್ಯ ಸರ್ಕಾರ ₨ 2,650 ಬೆಂಬಲ ಬೆಲೆಯನ್ನು ಘೋಷಿಸಿದೆ. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಯಾವುದೇ ಕಾರಣಕ್ಕೂ ₨ 2 ಸಾವಿರಗಿಂತ ಹೆಚ್ಚು ಕೊಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಈ ಕುರಿತು ಕಾನೂನು ರಚಿಸಲಾ­ಗುವುದು ಎಂದಿದೆ. ಅಲ್ಲಿಯವರೆಗೂ ನಾವು ಕಾಯುತ್ತೇವೆ. ಬಹುತೇಕ ಸಕ್ಕರೆ ಕಾರ್ಖಾನೆ ಮಾಲೀಕರು ಕಾಂಗ್ರೆಸ್‌ ಸರ್ಕಾರದ ಸಚಿವರು ಮತ್ತು ಶಾಸಕರೇ ಇದ್ದಾರೆ. ಹೀಗಾಗಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಉಳಿವಿಗಾಗಿ ಸರ್ಕಾರ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿಲ್ಲ’ ಎಂದು ಆರೋಪಿಸಿದರು.

ಶಾಸಕರಾದ ಎನ್‌.ಎಸ್‌. ಕೋನರಡ್ಡಿ, ಮಧು ಬಂಗಾರಪ್ಪ ಸೇರಿದಂತೆ ಪಕ್ಷದ ಅನೇಕ ಮುಖಂಡರು ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT