ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಿ’

Last Updated 13 ಸೆಪ್ಟೆಂಬರ್ 2013, 11:22 IST
ಅಕ್ಷರ ಗಾತ್ರ

ಚಾಮರಾಜನಗರ: ‘ಕಾಡಂಚಿನ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಅಲ್ಲಿನ ಮಕ್ಕಳಿಗೆ ಗುಣ­ಮಟ್ಟದ ಶಿಕ್ಷಣ ನೀಡುವಂತಹ ಉತ್ತಮ ಶಿಕ್ಷಕರಿಗೆ ಗೌರವ ಪ್ರಶಸ್ತಿ ನೀಡು­ತ್ತಿರುವುದು ಶ್ಲಾಘನೀಯ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ನಿತ್ಯಾ ಪ್ರವೀಣ್‌ ಹೇಳಿದರು.

ತಾಲ್ಲೂಕಿನ ಅಯ್ಯನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಾ ಬಂದಿರುವ ಮುಖ್ಯ ಶಿಕ್ಷಕ ರಾಜೇಂದ್ರ ಅವರಿಗೆ ‘ಶಿಕ್ಷಣ ರತ್ನ ಪ್ರಶಸ್ತಿ’ ದೊರೆತಿರುವುದು ಸಂತಸವಾಗಿದೆ. ಶಿಕ್ಷಕರು ಕೇವಲ ಪಾಠ ಪ್ರವಚನಕ್ಕೆ ಸೀಮಿತವಾಗದೆ ಮಕ್ಕಳ ಪ್ರತಿಭೆಗಳನ್ನು ಗುರುತಿಸಬೇಕು ಎಂದರು.

ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಪುನ: ಶಾಲೆಗೆ ಕರೆತರು­ವುದು, ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪಿಸಿ ಅವರ ಅಭಿವೃದ್ಧಿಗೆ ಕಾರಣ­ರಾಗಬೇಕು. ಇಂತಹ ಎಲ್ಲಾ ಕಾರ್ಯ­ಗಳನ್ನು  ಸಮರ್ಪಕವಾಗಿ ನಿರ್ವಹಿಸಿ ವಿದ್ಯಾರ್ಥಿಗಳ ಹಾಗೂ ಪೋಷಕರ ಪ್ರಶಂಸೆಗೆ ಕಾರಣರಾಗಿರುವ ಮುಖ್ಯ ಶಿಕ್ಷಕ ರಾಜೇಂದ್ರ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ದೊರೆತಿರುವುದು ಇತರ ಶಿಕ್ಷಕರಿಗೂ ಮಾದರಿಯಾಗಲಿದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಸೋಮ­ಶೇಖರ್, ಗ್ರಾ.ಪಂ. ಸದಸ್ಯರಾದ ರವಿ, ವಿಜೇಂದ್ರಸ್ವಾಮಿ, ಗೋವಿಂದರಾಜು, ಜಯಮ್ಮ ನಿಂಗಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT