ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ’

ಬೆಳಗಾವಿ ವಿಧಾನಮಂಡಲ ಅಧಿವೇಶನ–2013
Last Updated 7 ಡಿಸೆಂಬರ್ 2013, 8:49 IST
ಅಕ್ಷರ ಗಾತ್ರ

ಸುವರ್ಣಸೌಧ (ಬೆಳಗಾವಿ): ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ೪೯,೪೨೨ ಪ್ರಕರಣಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ೩,೧೪೫ ಪ್ರಕರಣಗಳು ದಾಖಲಾಗಿವೆ.

ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಜೆಡಿಎಸ್ ಸದಸ್ಯ ಪಟೇಲ್ ಶಿವರಾಂ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಈ ವಿಷಯ ತಿಳಿಸಿದ್ದಾರೆ.

ಈ ಪೈಕಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ೮೭೧ ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ೯೮ ಪ್ರಕರಣಗಳಲ್ಲಿ ಶಿಕ್ಷೆ ಯಾಗಿದೆ ಎಂಬ ವಿವರ ಒದಗಿಸಿದ್ದಾರೆ.

ಪ್ರಸಕ್ತ ವರ್ಷದ ಹನ್ನೊಂದು ತಿಂಗಳ ಅವಧಿಯಲ್ಲೇ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಅತ್ಯಧಿಕ (೧೦,೫೩೦) ಪ್ರಕರಣಗಳು ದಾಖಲಾಗಿವೆ. ೨೦೦೯ರಲ್ಲಿ ೯,೧೩೯, ೨೦೧ರಲ್ಲಿ ೯,೩೧೬, ೨೦೧೧ರಲ್ಲಿ ೧೦,೧೦೯ ಮತ್ತು ೨೦೧೨ರಲ್ಲಿ ೧೦,೩೨೮ ಪ್ರಕರಣಗಳು ದಾಖ ಲಾಗಿವೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆಯೂ ಈ ವರ್ಷವೇ ಹೆಚ್ಚು (೯೩೨). ೨೦೦೯ರಲ್ಲಿ ೩೫೮, ೨೦೧೦ರಲ್ಲಿ ೪೭೮, ೨೦೧೧ರಲ್ಲಿ ೬೩೨ ಮತ್ತು ೨೦೧೨ರಲ್ಲಿ ೭೪೫ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT