ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾಹಿತಿ ಹಕ್ಕು ಕಾಯ್ದೆ ಸ್ಪಂದಿಸಿ’

Last Updated 20 ಡಿಸೆಂಬರ್ 2013, 7:06 IST
ಅಕ್ಷರ ಗಾತ್ರ

ಬೀದರ್‌: ‘ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗಿ ಎಂಟು ವರ್ಷಗಳೇ ಕಳೆದಿವೆ. ಆದರೂ ಕಾಯ್ದೆ ಕುರಿತು ಕಾರ್ಯಾಗಾರ ನಡೆಯುತ್ತದೆ ಎಂದರೆ ಇನ್ನೂ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ಬಂದಿಲ್ಲ ಎಂಬುದಕ್ಕೆ ನಿದರ್ಶನ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಯ್ಯ ಹೇಳಿದರು.

ಜಿಲ್ಲಾಡಳಿತ ಹಾಗೂ ಮೈಸೂರು ಆಡಳಿತ ತರಬೇತಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ನಗರದ ರಂಗಮಂದಿರ­ದಲ್ಲಿ ಆಯೋಜಿಸಿದ್ದ ‘ಮಾಹಿತಿ ಹಕ್ಕು ಕಾಯ್ದೆ–2005’ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕಚೇರಿಗೆ ಯಾವುದಾದರೂ ಒಂದು ಅರ್ಜಿ ಬಂದರೂ ಕಚೇರಿಯ ಅಧಿಕಾರಿಗಳು ಭಯ ಪಡುತ್ತಿದ್ದಾರೆ. ಒಂದು ವೇಳೆ ಮಾಹಿತಿ ಸರಿಯಾದ ಸಮಯಕ್ಕೆ ನೀಡದಿದ್ದಲ್ಲಿ ದಂಡ ವಿಧಿಸಲಾಗುತ್ತದೆ ಎನ್ನುವ ಭಯ ಇದಕ್ಕೆ ಕಾರಣ’ ಎಂದು ತಿಳಿಸಿದರು.

‘ಸಾರ್ವಜನಿಕರು ಕಾಯ್ದೆ ಮೂಲಕ ಮಾಹಿತಿ ಪಡೆಯಲು ಆಸಕ್ತಿ ಹೊಂದಿದ್ದಾರೆ. ಅಧಿಕಾರಿಗಳು ಕಾಯ್ದೆಯನ್ನು ಅರ್ಥ ಮಾಡಿಕೊಂಡು ಪರಿಣಾಮಕಾರಿಯಾಗಿ ಜಾರಿಗೆ ತರಲು ಒತ್ತು ನೀಡಬೇಕು. ಕಾಯ್ದೆ ಕುರಿತು ತಿಳಿಯದಿದ್ದಲ್ಲಿ ಅನುಭವಿಗಳನ್ನು ಕೇಳಿ ತಿಳಿದುಕೊಳ್ಳಬೇಕು’ ಎಂದರು.

ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಬಿ.ಎಸ್‌.ಸ್ವಾಮಿ, ಮೈಸೂರಿನ ಜಿ.ಮಲ್ಲೇಶ್ವರಪ್ಪ, ಜಿ.ಜಿ. ಹೆಗಡೆ ಉಪಸ್ಥಿತರಿದ್ದರು.
ನಂತರ ನಡೆದ ಕಾರ್ಯಾಗಾರದಲ್ಲಿ ಕಾಯ್ದೆ ಕುರಿತ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದ ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ಸಿ.ಅಶೋಕ, ಯಾವುದೇ ರಜೆ ಅಥವಾ ಭಾನುವಾರ ಇದ್ದರೂ, ನಾಗರಿಕರು ಅರ್ಜಿ ಸಲ್ಲಿಸಿದ ದಿನದಿಂದ 30 ದಿನಗಳ ಒಳಗೆ ತಪ್ಪದೇ ಮಾಹಿತಿ ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT