ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯಾರೂ ಮಧ್ಯವರ್ತಿಗಳನ್ನು ನಂಬಬೇಡಿ’

ಸಾರ್ವಜನಿಕರಿಗೆ ಶಾಸಕ ಟಿ.ವೆಂಕಟರಮಣಯ್ಯ ಬುದ್ಧಿಮಾತು
Last Updated 20 ಸೆಪ್ಟೆಂಬರ್ 2013, 10:48 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ಸಾರ್ವಜನಿಕರು ಏನೇ ಸಮಸ್ಯೆಗಳಿದ್ದರೂ ನೇರವಾಗಿ ಬಂದು ನನ್ನನ್ನೇ ಸಂಪರ್ಕಿಸಿ. ಯಾರೂ ಕೂಡಾ ಮಧ್ಯವತಿರ್ಗಳನ್ನು ನಂಬಿ ನಡೆಯಬೇಡಿ’  ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ನಗರದಲ್ಲಿ ನೂತನವಾಗಿ ನಿರ್ಮಿಸಿ ರುವ ಪ್ರವಾಸಿ ಮಂದಿರ ಕಟ್ಟಡ ಉದ್ಘಾ ಟಿಸಿ ಅವರು ಮಾತನಾಡಿದರು.
‘ತಾಲ್ಲೂಕಿನಲ್ಲಿ ಈ ವರ್ಷ ಉತ್ತಮ ವಾಗಿ ಮಳೆಯಾಗಿದೆ. ಕುಡಿಯುವ ನೀರಿನ  ಬವಣೆ ನೀಗಲಿದೆ. ರಾಜ್ಯ ಸರ್ಕಾ ರದ ವಿವಿಧ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದರು.

ಬೆಂಗಳೂರಿನಲ್ಲಿರುವ ಉಪವಿಭಾ ಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗಳ ಕೇಂದ್ರ ಬದಲಾವಣೆಯ ಕುರಿತ ಎಲ್ಲ ಪ್ರಕ್ರಿಯೆಗಳು ಈಗಾಗಲೇ ಜಾರಿಯಲ್ಲಿವೆ ಎಂದು ತಿಳಿಸಿದರು.

ದೇವನಹಳ್ಳಿ ಕ್ಷೇತ್ರದ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ‘ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ಪ್ರಗತಿಯ ಮುಂಚೂಣಿಯಲ್ಲಿದೆ’ ಎಂದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಡಿ.ನಾಗರಾಜ್‌, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾ ಯಣಗೌಡ, ನಗರ ಸಭೆ ಪೌರಾಯುಕ್ತ ಬಿಳಿಕೆಂಚಪ್ಪ, ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ ಮೋಹನ್‌ ಕುಮಾರ್‌, ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ತಿ.ರಂಗರಾಜ್‌, ್ ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್‌್, ತಾಲ್ಲೂಕು ಪಂಚಾಯ್ತಿ ಸದಸ್ಯೆ ನರಸಮ್ಮ, ಶಾಮಲಮ್ಮ ಹಾಗೂ ನಗರ ಸಭೆ ಸದಸ್ಯರು ಭಾಗವಹಿಸಿದ್ದರು.      

‘ಹೊಗಳಿಕೆಗೆ ಬೆಸ್ತು ಬಿದ್ದ ಕಾಂಗ್ರೆಸ್‌ ಮುಖಂಡರು’
ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಹಾಗೂ  ಬಿಜೆಪಿ ಮುಖಂಡ ಎನ್‌.ಹನುಮಂತೇ ಗೌಡ ಅವರ ಹೊಗಳಿಕೆಯಿಂದ ಕಾಂಗ್ರೆಸ್‌ ಮುಖಂಡರು ಮುಜುಗರಕ್ಕೆ ಒಳಗಾದ ಪ್ರಸಂಗ ಪ್ರವಾಸಿ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ನಡೆ ಯಿತು.

ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಎನ್‌.ಹನುಮಂತೇಗೌಡ, ‘ತಾಲ್ಲೂಕಿನಲ್ಲಿ ನಡೆದ ಪ್ರತಿ ಗ್ರಾಮಸಭೆ ಗಳಿಗೂ ಶಾಸಕ ಟಿ.ವೆಂಕಟ ರಮಣಯ್ಯ ಎಲ್ಲಾ ಅಧಿಕಾರಿಗಳೊಂದಿಗೆ ಭಾಗವಹಿಸಿ ವಿವಿಧ ಇಲಾಖೆಗಳ ವತಿಯಿಂದ ಜನರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಕರಪತ್ರಗಳ ಮೂಲಕ ಮಾಹಿತಿ ನೀಡಿ ರುವುದು ಇದೇ ಪ್ರಥಮವಾಗಿದೆ. ಇದರಿಂದ ಸಾರ್ವಜನಿಕರಿಗೆ ಸಹಕಾ ರಿಯಾಗಿದೆ. ಹಲವಾರು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಕ್ಕಲಮಡಗು ವಿವಾದವನ್ನು ಸುಗಮ ವಾಗಿ ಬಗೆ ಹರಿಸುವ ಮೂಲಕ ನಗರಕ್ಕೆ ಕುಡಿ ಯುವ ನೀರು ತಂದಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕ್ಷೀರಭಾಗ್ಯ ಯೋಜನೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿನ ಅಪೌಷ್ಟಿಕತೆ ನಿವಾರ ಣೆಯಾಗಲಿದೆ’ ಎಂದು ರಾಜ್ಯ ದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಹಾಡಿ ಹೊಗಳಿದರು.  

‘ಗೈರು’
ಪ್ರವಾಸಿ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯಲ್ಲೂ ಲೋಕೋಪಯೋಗಿ ಸಚಿವ ಎಚ್‌.ಸಿ.ಮಹಾದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಹೆಸರು ಇದ್ದವು. ಆದರೆ ಸಚಿವ ರಾದಿಯಾಗಿ ಯಾರೊಬ್ಬರು ಸಮಾರಂ ಭಕ್ಕೆ ಆಗಮಿಸಲೇ ಇಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT