ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಖಚಿತ’

Last Updated 17 ಡಿಸೆಂಬರ್ 2013, 6:55 IST
ಅಕ್ಷರ ಗಾತ್ರ

ಹೊಸಪೇಟೆ: ‘ಮಾಜಿ ಸಂಸದ ಎನ್.ವೈ. ಹನುಮಂತಪ್ಪ ಅವರ ಆರೋಗ್ಯ ಸರಿಯಿಲ್ಲದ ಕಾರಣ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್‌ ನನಗೆ ದೊರೆಯಲಿದೆ’ ಎಂದು ಕಾಂಗ್ರೆಸ್ ಮುಖಂಡ ಜಿ.ಕೆ.ಹನುಮಂತಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಇತ್ತೀಚೆಗೆ ನಾನು ಮತ್ತು ಕಾಂಗ್ರೆಸ್ ಮುಖಂಡ ಅಬ್ದುಲ್ ವಹಾಬ್ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಲೋಕಸಭೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದೇವೆ.

ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ನನ್ನನ್ನು ಪರಿಗಣಿಸುವ ಕುರಿತು ವರಿಷ್ಠರಿಗೆ ಮನವರಿ ಮಾಡಿಕೊಡ­ಲಾಗಿದೆ. ಅಲ್ಲದೆ ಚುನಾವಣೆಯಲ್ಲಿ ಹೊಸ­ಪೇಟೆ ವಿಧಾನಸಭಾ ಕ್ಷೇತ್ರ ನಿರ್ಣಾ­ಯಕವಾಗಿದ್ದು, ನನ್ನನ್ನು ಅಭ್ಯ­ರ್ಥಿನ್ನಾಗಿ ಮಾಡಿದರೆ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ವರಿಷ್ಠರ ಗಮನಕ್ಕೆ ತರಲಾಗಿದೆ’ ಎಂದು ತಿಳಿಸಿದರು.

‘ತಮ್ಮ ಮನವಿಗೆ ಧನಾತ್ಮಕವಾಗಿ ಸ್ಪಂದಿಸಿರುವ ವರಿಷ್ಠರು ಟಿಕೆಟ್‌ ನೀಡುವ ಭರವಸೆ ನೀಡಿದ್ದಾರೆ. ಈವ­ರೆಗೂ ಎನ್.ವೈ.ಹುನಮಂತಪ್ಪ ಅವರ ಹೆಸರೆ ಮೊದಲು ಇದ್ದು, ಅವರ ಆರೋಗ್ಯದಲ್ಲಿ ಏರುಪೇರು ಇರುವು­ದರಿಂದ ಹಾಗೂ ಪಕ್ಷ ಸಂಘಟನೆಯಲ್ಲಿ ಅವರು ಪಾಲ್ಗೊಳ್ಳಲು ಸಾಧ್ಯವಾ­ದಿರುವ ಕಾರಣದಿಂದ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಅವರನ್ನು ಪರಿಗಣಿಸುವ ಸಾಧ್ಯತೆ ಕಡಿಮೆ' ಎಂದರು.

‘ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಲವು ದಶಕಗಳಿಂದ ಪಕ್ಷದ ಏಳ್ಗೆಗೆ ಶ್ರಮಿಸಿದ್ದೇನೆ. ಇದನ್ನು ಪರಿಗಣಿಸಿ ಪಕ್ಷ ಈ ಬಾರಿ ಲೋಕಸಭೆ ನನಗೆ ಟಿಕೆಟ್ ನೀಡಬೇಕು. ಒಂದು ವೇಳೆ ಪಕ್ಷ ನನಗೆ ಟಿಕೆಟ್‌ ನೀಡಿದರೆ ಗೆಲವು ಸುಲಭವಾಗಲಿದೆ’ ಎಂದರು.

200 ಟನ್ ಕಬ್ಬು ಅರಿಯಲು ಆದೇಶ: ‘ಸ್ಥಳೀಯ ಐಎಸ್ಆರ್ ಕಾರ್ಖಾನೆ­ಯಿಂದ ರೈತರಿಗೆ ಆಗುತ್ತಿರುವ ತೊಂದರೆ ಹಾಗೂ ಅದರ ವಾಸ್ತವ ಸ್ಥಿತಿ ಕುರಿತು ನಾನು ಮತ್ತು ಅಬ್ದುಲ್ ವಹಾಬ್ ಅವರು ದಾಖಲೆಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇವು. ಈ ಕಾರಣದಿಂದಲೇ ಇಂದು ಸಕ್ಕರೆ ಆಯುಕ್ತರು ಕಾರ್ಖಾನೆಗೆ ಕೇವಲ 200 ಮೆಟ್ರಿಕ್‌ ಟನ್ ಕಬ್ಬು ಅರಿಯುವ ಸಾಮರ್ಥ್ಯ ಹೊಂದಿದೆ. ಇದರಿಂದ ಕಾರ್ಖಾನೆಯ ವ್ಯಾಪ್ತಿಯಲ್ಲಿರುವ ಹೆಚ್ಚವರಿ ಕಬ್ಬನ್ನು ಬೇರೆ ಕಾರ್ಖಾನೆಗಳಿಗೆ ಸಾಗಿಸಲು ಅನುಮತಿ ನೀಡಬೇಕು’ ಎಂದು ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ’ ಎಂದು ತಿಳಿಸಿದರು. ಕಾರ್ಖಾನೆಯ ಮಾಲೀಕ ಒಪ್ಪಿಕೊಂಡು ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕಬ್ಬು ಅರಿಯಬೇಕು' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT