ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಜ್ಞಾನ ಅನ್ವೇಷಣೆಗಳಲ್ಲಿ ವಿದ್ಯಾರ್ಥಿಗಳು ತೊಡಗಬೇಕು’

Last Updated 11 ಡಿಸೆಂಬರ್ 2013, 8:11 IST
ಅಕ್ಷರ ಗಾತ್ರ

ಯಾದಗಿರಿ: ಮಕ್ಕಳ ಭೌತಿಕ ಬೆಳವಣಿಗೆಗೆ ವಿಜ್ಞಾನದ ಅನ್ವೇಷಣಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು ತರುತ್ತದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನದ ಬಗ್ಗೆ ದಿನೇ ದಿನೇ ಹೊಸ ಅನ್ವೇಷಣೆ­ಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿ­ಕೊಳ್ಳುವುದು ಅತಿ ಅವಶ್ಯಕ­ವಾಗಿದೆ ಎಂದು ಉಪನಿರ್ದೇಶಕರ ಕಚೇರಿಯ ವಿಜ್ಞಾನ ವಿಷಯ ಪರಿ­ವೀಕ್ಷಕ­ ಬಿ.ಯಂಕೋಬ ಅಭಿಪ್ರಾಯಪಟ್ಟರು.

ಇಲ್ಲಿನ ಆದರ್ಶ ವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಮಾರುತಿ ಹುಜರಾತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಈಗ ಪ್ರತಿಯೊಂದು ವಿಷಯ ಅರಿತುಕೊಳ್ಳಲು ಇಂದಿನ ಮಾಧ್ಯಮ ಹಾಗೂ ತಂತ್ರಜ್ಞಾನಗಳು ಪೂರಕವಾಗಿವೆ. ಜಗತ್ತಿನಲ್ಲಿ ನಡೆ­ಯುವ ವಿಜ್ಞಾನದ ಹೊಸ ಹೊಸ ಆವಿಷ್ಕಾರಗಳ ಬಗ್ಗೆ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಕರು ತೋರಿಸಿ ಮಾರ್ಗದರ್ಶಕರಾಗಬೇಕು ಎಂದು ಹೇಳಿದರು.

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಬಸನಗೌಡ ಹಾಗೂ ಯಾದಗಿರಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಎಸ್. ಗೊಂಧಳೆ ಮಾತನಾಡಿದರು. ಬೋಧಕರಾದ ಸುಹಾಸಿನಿ ಹಾಗೂ ರೇಷ್ಮಾದೇವಿ, ಲತಾಬಾಯಿ, ಭಗವಂತ, ಭಾಗ್ಯಶ್ರೀ, ಆಶಾ ಎಚ್. ಮಾರ್ಗದರ್ಶನ ನೀಡಿದರು.

ಮೇಳದಲ್ಲಿ ವಿದ್ಯಾರ್ಥಿಗಳು ಸುಮಾರು 60ಕ್ಕೂ ಹೆಚ್ಚಿನ ವಿಜ್ಞಾನ ಮಾದರಿ ತಯಾರಿಸಿ ವಿವರಣೆ ಹಾಗೂ ಉಪಯೋಗದ ಕುರಿತು ಮಾಹಿತಿ ನೀಡಿದರು. ಆದರ್ಶ ವಿದ್ಯಾಲಯದ ಪ್ರಾಚಾ­ರ್ಯ ಎಂ.ಉಮಾಕಾಂತ ಅಧ್ಯಕ್ಷತೆ ವಹಿಸಿದ್ದರು. ಅಶ್ವಿನಿರಾಣಿ ಸ್ವಾಗತಿಸಿ­ದರು, ವಿಮಲಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT